ಪ್ರೇಯಸಿಯೊಂದಿಗೆ ಸೇರಿ ಪತ್ನಿಯ ಕತ್ತು ಹಿಸುಕಿ ಕೊಂದು ಕೆರೆಗೆಸೆದ ಪತಿ!

marder
26/01/2024

ದಾವಣಗೆರೆ: ಪತಿಯೋರ್ವ ತನ್ನ ಪ್ರೇಯಸಿಯೊಂದಿಗೆ ಸೇರಿ ಪತ್ನಿಯನ್ನು ಹತ್ಯೆಮಾಡಿ ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವ ಘಟನೆ ದಾವಣಗೆರೆಯ ಕೊಡಗನೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಚಿನ್ ಮತ್ತು ಮೃತ ಕಾವ್ಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದು,ದಂಪತಿಗೆ ಒಂದು ಮಗು ಕೂಡ ಇತ್ತು. ಆದರೂ ಆರೋಪಿ ಸಚಿನ್ ದಾವಣಗೆರೆಯ ಕಡ್ಲೆಬಾಳು ಗ್ರಾಮದ ನಿವಾಸಿ ಚೈತ್ರಾ ಎಂಬಾಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು,ಆಕೆಯನ್ನೂ ಎರಡನೇ ಮದುವೆಯಾಗಿದ್ದ ಎನ್ನಲಾಗಿದೆ.

ಇದೇ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿದ್ದು ಮೃತ ಕಾವ್ಯ ತವರು ಸೇರಿದ್ದಳು. ಮತ್ತೆ ಜ.6 ರಂದು ಆಕೆಯನ್ನು ಸಚಿನ್ ಮರಳಿ ಕರೆದುಕೊಂಡು ಬಂದಿದ್ದ. ಈ ವೇಳೆ ಮತ್ತೆ ಗಂಡ ಹೆಂಡತಿ ನಡುವೆ ಮತ್ತೆ ಜಗಳ ನಡೆದಿದ್ದು, ಈ ವೇಳೆ ಆಕ್ರೋಶಗೊಂಡ ಪತಿ ಪ್ರೇಯಸಿ , ಚೈತ್ರಾ ಜೊತೆ ಸೇರಿ ಕಾವ್ಯನನ್ನು ಕತ್ತು ಹಿಸುಕಿ ಹತ್ಯೆಗೈದಿದ್ದಾರೆ. ಬಳಿಕ ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದಿದ್ದಾರೆ.

ಇತ್ತ ಕಾವ್ಯಾಳ ಸುಳಿವಿಲ್ಲದೇ ಅನುಮಾನಗೊಂಡ ಆಕೆಯ ಮನೆಯವರು ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು . ಅನುಮಾನಗೊಂಡ ಪೋಲಿಸರು ಸಚಿನ್ ನನ್ನು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಾಯ್ಬಿಟ್ಟಿದ್ದು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version