ಗಾಯಗೊಂಡಿದ್ದ ನವಿಲು ಚಿಕಿತ್ಸೆ ಫಲಕಾರಿಯಾಗದೆ ಸಾವು

ಯಾವುದೋ ಪ್ರಾಣಿಯೊಂದು ಕಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ನವಿಲೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿ ನಗರದ ಬೈಲೂರು ವಾರ್ಡಿನ ದಶರಥನಗರದಲ್ಲಿ ನಡೆದಿದೆ.
ಗಾಯಗೊಂಡಿದ್ದ ನವಿಲನ್ನು ಸ್ಥಳೀಯ ನಿವಾಸಿ ನಾಗರಾಜ್ ಭಟ್ ಅವರು ರಕ್ಷಿಸಿದ್ದರು. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ಬಂದ ಒಳಕಾಡು ಅವರು ಪಶು ವೈದ್ಯ ಸಂದೀಪ್ ಕುಮಾರ್ ಅವರನ್ನು ಸಂಪರ್ಕಿಸಿ ನವಿಲನ್ನು ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ನವಿಲು ಸಾವನ್ನಪ್ಪಿದೆ. ನಂತರ ನವಿಲಿನ ಮೃತದೇಹವನ್ನು ಗಸ್ತು ಅರಣ್ಯ ಅಧಿಕಾರಿ ದೇವರಾಜ ಪಾಣಾ ಅವರಿಗೆ ಹಸ್ತಾಂತರಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw