ಐವನ್ ಡಿಸೋಜ ಮನೆಯ ಮೇಲೆ ಕಲ್ಲೆಸೆದು ಪರಾರಿಯಾದ ದುಷ್ಕರ್ಮಿಗಳು!

22/08/2024
ಮಂಗಳೂರು: ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆಯ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಐವನ್ ಡಿಸೋಜ ಅವರ ವೆಲೆನ್ಸಿಯಾದಲ್ಲಿರುವ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯ ಕಿಟಕಿಯ ಫ್ರೇಮ್ಗೆ ಕಲ್ಲು ಬಿದ್ದಿದ್ದು, ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ, ಸ್ಥಳಕ್ಕೆ ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97