ಇಂಜಿನಿಯರ್ ನ ಕಾಲರ್ ಹಿಡಿದು ಕಪಾಳಕ್ಕೆ ಬಾರಿಸಿದ ಶಾಸಕಿ!

ಮಹಾರಾಷ್ಟ್ರ: ಶಾಸಕಿಯೊಬ್ಬರು ಇಂಜಿನಿಯರ್ ನ ಕಪಾಳಕ್ಕೆ ಬಾರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ ಯಾವುದೇ ಸೂಚನೆಯಿಲ್ಲದೆ ಮನೆಯೊಂದರಲ್ಲಿ ವಾಸಿಸುತ್ತಿದ್ದವರನ್ನು ಹೊರಹಾಕಿ ಕಟ್ಟಡವನ್ನು ನೆಲಸಮಗೊಳಿಸಿದೆ. ಇದರಿಂದ ಕುಟುಂಬದ ಮಹಿಳೆಯರು, ಮಕ್ಕಳು ಸೇರಿದಂತೆ ನಿವಾಸಿಗಳು ರಸ್ತೆಯಲ್ಲೇ ಪರದಾಡಬೇಕಾಗುವ ಸ್ಥಿತಿ ನಿರ್ಮಾಣವಾಗಿತ್ತು.
ಈ ವಿಚಾರದ ಬಗ್ಗೆ ಮಹಿಳೆಯೊಬ್ಬರು ಥಾಣೆ ಜಿಲ್ಲೆಯ ಮೀರಾ ಭಯಂದರ್ ನ ಶಾಸಕಿ ಗೀತಾ ಜೈನ್ ಅವರಿಗೆ ದೂರು ನೀಡಿದ್ದರು. ಈ ಸಂದರ್ಭದಲ್ಲಿ ಇಂಜಿನಿಯರ್ ಸೇರಿದಂತೆ ಅಧಿಕಾರಿಗೆ ಶಾಸಕಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕನಿಷ್ಠ ಮಾನವೀಯತೆಯೂ ಇಲ್ಲದೇ ನೊಂದ ಕುಟುಂಬವನ್ನು ಹೊರ ಹಾಕಿದ ವಿಚಾರಕ್ಕೆ ತೀವ್ರ ಆಕ್ರೋಶಗೊಂಡ ಶಾಸಕಿ ನಿಯಂತ್ರಣ ಕಳೆದುಕೊಂಡು ಇಂಜಿನಿಯರ್ ಅವರ ಕಾಲರ್ ಹಿಡಿದು ಆತನ ಕಪಾಳಕ್ಕೆ ಬಾರಿಸಿದ್ದಾರೆ.
ತಮ್ಮ ಮನೆ ಕೆಡವುತ್ತಿರುವಾಗ ಅಳುತ್ತಿದ್ದ ಮಹಿಳೆಯರನ್ನು ನೋಡಿ ಪೌರಾಡಳಿತದ ಅಧಿಕಾರಿಗಳು ನಗುತ್ತಿರುವುದನ್ನು ನೋಡಿ ನನಗೆ ಬೇಸರವಾಯಿತು. ಅವನಿಗೆ ಕಪಾಳಮೋಕ್ಷ ಮಾಡುವ ತನ್ನ ನಡೆಯನ್ನು ಸಹಜ ಪ್ರತಿಕ್ರಿಯೆ ಎಂದು ಶಾಸಕಿ ಹೇಳಿದ್ದಾರೆ.
ಈ ವಿಷಯವನ್ನು ನಾನು ವಿಧಾನಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಕಪಾಳಕ್ಕೆ ಏಟು ಪಡೆದ ಇಂಜಿನಿಯರ್ ಬೇಕಾದರೆ ನನ್ನ ವಿರುದ್ಧ ಪ್ರಕರಣ ದಾಖಲಿಸಲಿ. ಅದನ್ನು ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಶಾಸಕಿ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw