ತಾಯಿ ‘ಮಕ್ಕಳನ್ನು ಕಾಪಾಡಿ’ ಎಂದು ಗೋಗರೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಗುಡ್ಡಕುಸಿತ ಪ್ರಕರಣದಲ್ಲಿ ಇಬ್ಬರು ಮಕ್ಕಳ ಸಹಿತ ಮೂವರು ಸಾವನ್ನಪ್ಪಿದ್ದಾರೆ.
ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ಭಾರೀ ಮಳೆಯ ಹಿನ್ನೆಲೆ ಗುಡ್ಡ ಕುಸಿದು ಬಿದ್ದು, ಮನೆ ಕುಸಿದು ಬಿದ್ದಿದ್ದು, ಮನೆ ಮಾಲಿಕ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮಾ(58) ಸಾವನ್ನಪ್ಪಿದ್ದಾರೆ. ಇದೇ ವೇಳೆ ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳು ಅವಶೇಷಗಳಡಿಯಲ್ಲಿ ಸಿಲುಕಿದ್ದರು.
ಅವಶೇಷಗಳಡಿಯಲ್ಲಿ ಸಿಲುಕಿದ್ದ ತಾಯಿ ಅಶ್ವಿನಿ ತನ್ನ ಇಬ್ಬರು ಮಕ್ಕಳನ್ನು ಕಾಪಾಡಿ ನನ್ನನ್ನು ಬಿಟ್ಟು ಬಿಡಿ ಎಂದು ಗೋಗರೆಯುತ್ತಿದ್ದ ದೃಶ್ಯ ಹೃದಯವಿದ್ರಾವಕವಾಗಿತ್ತು.
ಶುಕ್ರವಾರ ಮುಂಜಾನೆ 4 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿತ್ತು. ಮಧ್ಯಾಹ್ನ 2 ಗಂಟೆಯವರೆಗೂ ಅವಶೇಷಗಳಡಿಯಿಂದ ಮಹಿಳೆ ಮತ್ತು ಮಕ್ಕಳನ್ನು ಹೊರ ತೆಗೆಯಲು ಸಾಧ್ಯವಾಗಿರಲಿಲ್ಲ. ಬಳಿಕ ಇಬ್ಬರು ಮಕ್ಕಳು ಮತ್ತು ಮಹಿಳೆಯನ್ನು ಹೊರ ತೆಗೆಯಲಾಯಿತಾದರೂ, ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ತಾಯಿ ಅಶ್ವಿನಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD