ಬಿಗ್ ಬಾಸನ್ನೇ ಮನೆಯಿಂದ ಹೊರ ಹಾಕಿದ ಅಧಿಕಾರಿಗಳು!

ಪ್ರತಿಬಾರಿಯೂ ಬಿಗ್ ಬಾಸ್ ಸ್ಪರ್ಧಿಗಳನ್ನು ಹೊರಗೆ ಹಾಕುತ್ತಿದ್ದರು. ಆದ್ರೆ ಈ ಬಾರಿ ಅಸಲಿ ಆಟವೇ ಬದಲಾಗಿದೆ. ಇದೀಗ ಬಿಗ್ ಬಾಸೇ ಮನೆಯಿಂದ ಹೊರಕ್ಕೆ ಹಾಕಲ್ಪಟ್ಟಿದ್ದಾರೆ. ಸ್ಪರ್ಧಿಗಳಿಗೆ ಜೀವನ ಪಾಠ ಹೇಳೋ ಬಿಗ್ ಬಾಸ್ ಈ ಬಾರಿ ಮೈಮರೆತಿದ್ದೇ ಈ ಘಟನೆ ಕಾರಣ ಅಂತ ಹೇಳಲಾಗಿದೆ.
ಹೌದು..! ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದ ಕಾರಣದಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಸ್ಥಗಿತಗೊಂಡಿದೆ. ಕೆಲವೇ ದಿನಗಳ ಹಿಂದೆ ಆರಂಭ ಆಗಿದ್ದ ಈ ಕಾರ್ಯಕ್ರಮಕ್ಕೆ ಕಾನೂನಿನ ತೊಡಕು ಉಂಟಾಗಿದೆ.
ಇಂದು ಬಿಗ್ ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಗೆ ರಾಮನಗರ ಜಿಲ್ಲಾಡಳಿತ ಅಧಿಕಾರಿಗಳು ಬೀಗ ಹಾಕಿದ್ದಾರೆ. ಮನೆಯಲ್ಲಿದ್ದ ಎಲ್ಲ ಸ್ಪರ್ಧಿಗಳನ್ನು ಮನೆಯಿಂದ ಹೊರ ಹಾಕಲಾಗಿದ್ದು, ಮುಂದಿನ ನಡೆ ಏನು ಎನ್ನುವ ಬಗ್ಗೆ ಕಾರ್ಯಕ್ರಮ ಆಯೋಜಕರು ಚರ್ಚೆ ನಡೆಸ್ತಾ ಇದ್ದಾರೆ.
ಕಾಕ್ರೋಜ್ ಸುಧಿ, ಮಲ್ಲಮ್ಮ, ಅಶ್ವಿನಿ ಗೌಡ, ಮಾಳು ನಿಪನಾಳ, ಗಿಲ್ಲಿ ನಟ, ಕಾವ್ಯ ಶೈವ, ಅಶ್ವಿನಿ, ಮಂಜು ಭಾಷಿಣಿ, ಅಭಿಷೇಕ್, ಸತೀಶ್, ಚಂದ್ರಪ್ರಭ, ರಕ್ಷಿತಾ ಶೆಟ್ಟಿ, ರಾಶಿಕಾ, ಧ್ರುವಂತ್ ಮುಂತಾದವರು ಬಿಗ್ ಬಾಸ್ ಸ್ಪರ್ಧಿಗಳಾಗಿದ್ದರು. ಅವರೆಲ್ಲರನ್ನೂ ಈಗ ಮನೆಯಿಂದ ಹೊರಗೆ ಕಳಿಸಲಾಗಿದೆ. ಎಲ್ಲ ಸ್ಪರ್ಧಿಗಳನ್ನು ಸದ್ಯ ರಾಮನಗರ ತಾಲೂಕಿನ ಬಿಡಿದಿಯಲ್ಲಿರುವ ಈಗಲ್ಟನ್ ರೆಸಾರ್ಟ್ಗೆ ಸ್ಥಳಾಂತರ ಮಾಡಲಾಗಿದೆ. ಈ ರೆಸಾರ್ಟ್ಬಲ್ಲಿ 12 ರೂಮ್ ಬುಕ್ ಮಾಡಲಾಗಿದೆ.
ಮುಂದಿನ ತೀರ್ಮಾನ ತೆಗೆದುಕೊಳ್ಳುವ ತನಕ ಎಲ್ಲರನ್ನು ಒಂದು ಕಡೆ ಇರಿಸಲಾಗುತ್ತದೆ. ಬಿಗ್ ಬಾಸ್ ಆಯೋಜಕರು ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD