5:28 PM Thursday 20 - November 2025

ಗಡಿಪಾರಾಗಿದ್ದ ರೌಡಿಶೀಟರ್ ನನ್ನು ಬಂಧಿಸಿ ಮತ್ತೆ ಗಡಿಪಾರು ಮಾಡಿದ ಪೊಲೀಸರು!

lokesh
06/05/2023

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಮಂಗಳೂರು ಪೊಲೀಸರು ಬಂಧಿಸಿ, ಮತ್ತೆ ಗಡಿಪಾರು ಮಾಡಿದ್ದಾರೆ.

ಚುನಾವಣೆಯ ಹಿನ್ನೆಲೆಯಲ್ಲೇ ಈತನನ್ನು ಈ ಹಿಂದೆ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿತ್ತು. ಈ ಆದೇಶವನ್ನು ಉಲ್ಲಂಘಿಸಿ ಈತ ಮತ್ತೆ ಜಿಲ್ಲೆಗೆ ಪ್ರವೇಶಿಸಿದ್ದ ಎಂದು ಹೇಳಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ಮೊನ್ನೆ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಯಾನೆ ಲೋಕು ಎಂಬಾತ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಪರ ಪ್ರಚಾರ ಮಾಡುತ್ತಿದ್ದ ಎಂದು ಸಾರ್ವಜನಿಕರು ದ.ಕ.ಜಿಲ್ಲಾ ಎಸ್ಪಿಗೆ ಮಾಹಿತಿ ನೀಡಿದ್ದರು.

ಈ ವಿಷಯ ತಿಳಿದುಕೊಂಡ ರೌಡಿಶೀಟರ್ ಲೋಕೇಶ್ ಅಲ್ಲಿಂದ ತಪ್ಪಿಸಿಕೊಂಡ ಎನ್ನಲಾಗಿದೆ. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಬಂಟ್ವಾಳ ಪರಿಸರದಿಂದ ಬಂಧಿಸಿದ್ದಾರೆ. ಅಲ್ಲದೆ ಗುಲ್ಬರ್ಗಕ್ಕೆ ಗಡಿಪಾರು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version