11:32 AM Saturday 18 - October 2025

ಚಿನ್ನದ ಸರ ಸುಲಿಗೆ ಆರೋಪ ಎದುರಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ದೋಷಮುಕ್ತ

manglore
31/01/2023

ನೀರು ಕೇಳುವ ನೆಪದಲ್ಲಿ ಚಿನ್ನದ ಸರ ಸುಲಿಗೆ ಮಾಡಲಾಗಿದೆ ಎಂಬ ಆರೋಪ ಎದುರಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ರನ್ನು ದೋಷಮುಕ್ತಗೊಳಿಸಿ ಮಂಗಳೂರು ಕೋರ್ಟ್ ತೀರ್ಪು ನೀಡಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಂದೇಶ ಎಂಬುವವರು 2016ರ ಎಪ್ರಿಲ್ 12ರಂದು ಮಂಗಳೂರಿಗೆ ಆಗಮಿಸಿದ್ದರು. ಆ ವೇಳೆ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಇರೋ ಖಾಸಗಿ ಕಾಲೇಜು ಕಡೆಗೆ ಹೋಗುವ ರಸ್ತೆಯಲ್ಲಿ ಮಹಿಳೆಯೊಬ್ಬರಲ್ಲಿ ಕುಡಿಯಲು ನೀರು, ಪೋನ್ ನಂಬರ್ ಕೇಳುವ ನೆಪದಲ್ಲಿ ಆಕೆಯ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆ ಮಾಡಲು ಯತ್ನಿಸಿದ್ದರು.

ಆ ವೇಳೆ ಮಹಿಳೆಯು ದೂಡಿದ್ದು, ಆವಾಗ ಪಿಸಿ ಮಹಿಳೆಯನ್ನು ಗಾಯಗೊಳಿಸಿ ಚಿನ್ನದ ಸರದ ತುಂಡುಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ 6ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್. ವಿ. ಅವರು ಆರೋಪಿತ ಪೊಲೀಸ್ ಕಾನ್ ಸ್ಟೇಬಲ್ ರನ್ನು ದೋಷ ಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ

Exit mobile version