ಕರ್ಕಶ ಶಬ್ದದ ದ್ವಿಚಕ್ರ ವಾಹನಗಳ ಸೈಲೆನ್ಸರ್ ಮೇಲೆ ರೋಲರ್ ಹರಿಸಿದ ಪೊಲೀಸರು!
ಉಡುಪಿ: ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಿನಿಂದ ಕಾರ್ಯಾಚರಣೆ ನಡೆಸಿ ವಾಹನಗಳಿಗೆ ದಂಡ ವಿಧಿಸಿ ವಶಪಡಿಸಿಕೊಳ್ಳಲಾದ ವಶಪಡಿಸಿಕೊಂಡ ಸೈಲೆನ್ಸರ್ಗಳನ್ನು ಶನಿವಾರ ರೋಲರ್ ಮೂಲಕ ನಿಷ್ಕ್ರೀಯಗೊಳಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ನಿರ್ದೇಶನದ ಮೇರೆಗೆ ಕಳೆದ 6 ತಿಂಗಳಿನಿಂದ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಲ್ಲಿನ ಅನಧಿಕೃತ ಸೈಲೆನ್ಸರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಹೀಗೆ ಒಟ್ಟು 60ರಿಂದ 70 ವಾಹನಗಳಲ್ಲಿ ಅಳವಡಿಸಿದ್ದ ಅನಧಿಕೃತ ಸೈಲೆನ್ಸರ್ಗಳನ್ನು ವಶಪಡಿಸಿಕೊಂಡು ತಲಾ 500 ರೂ.ನಂತೆ ದಂಡ ವಿಧಿಸಲಾಗಿತ್ತು.
ಮೂಲ ಸೈಲೆನ್ಸರ್ ಬದಲಾಯಿಸಿ ವಾಲ್ಟ್ರೇಷನ್ ಮಾಡಿಸಿದ್ದ 4 ವಾಹನಗಳನ್ನು ವಶಪಡಿಸಿ ಆರ್ಟಿಓ ಮೂಲಕ 60 ಸಾವಿರ ರೂ.ದಂಡ ವಿಧಿಸಲಾಗಿದೆ. ವಾರಾಂತ್ಯದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ವ್ಹೀಲಿಂಗ್ ನಡೆಸುವುದು ಹಾಗೂ ನಿಯಮಾವಳಿ ಉಲ್ಲಂಘಿಸುವವರ ಮೇಲೆ ಸೂಕ್ತ ಕ್ರಮ ಜರಗಿಸ ಲಾಗುವುದು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಉಡುಪಿ ಡಿವೈಎಸ್ಪಿ ದಿನಕರ, ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ ಟಿ.ವಿ., ಎಎಸ್ ಐ ನವೀನ್ ನಾಯ್ಕಾ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























