5:07 PM Thursday 11 - December 2025

ನಿಜವಾದ ಸಂತ್ರಸ್ತ ಅತುಲ್ ಅಲ್ಲ, ನಾನು: ಪೊಲೀಸರ ಮುಂದೆ ಅತುಲ್ ಪತ್ನಿ ಹೇಳಿದ್ದೇನು?

atul
18/12/2024

ಬೆಂಗಳೂರು: ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ವಿಚಾರಣೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ವಿಚಾರಣೆ ವೇಳೆ ನಿಖಿತಾ,  ಅತುಲ್ ಸಂತ್ರಸ್ತನಲ್ಲ, ನಾನೇ ನಿಜವಾದ ಸಂತ್ರಸ್ತೆ ಎಂದು ನಿಖಿತಾ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ನಾನು ಚೆನ್ನಾಗಿ ಅಡುಗೆ ಮಾಡಿಲ್ಲ ಎಂದು ಕಿರುಕುಳ ನೀಡುತ್ತಿದ್ದ. ನಾನ್ ವೆಚ್ ಮಾಡದಿದ್ದರೂ ಇವರು ಮಾಡಿ ಎಂದು ಒತ್ತಾಯಿಸುತ್ತಿದ್ದರು. ಇಷ್ಟೆಲ್ಲ ಆದ್ರೂ ನಾನು ಮನೆ ಬಿಟ್ಟು ಹೋಗಿರ್ಲಿಲ್ಲ,  ಮನೆ ಬಿಟ್ಟು ಹೋಗುವಂತೆ ಮಾಡಿದ್ದು ಅತುಲ್ ಹೊರತು ನಾನಲ್ಲ ಎಂದು ಹೇಳಿದ್ದಾರೆನ್ನಲಾಗಿದೆ.

ನಾನು ಅತುಲ್ ಬೇರೆ ಬೇರೆ ಕಡೆ ವಾಸ ಮಾಡುತ್ತಿದ್ದೇವೆ. ಅತುಲ್ ಮಾಡಿರುವ ಆರೋಪ ಸುಳ್ಳು,  ನಾನು ಎಲ್ಲವನ್ನೂ ಕಾನೂನಾತ್ಮಕವಾಗಿ ನೋಡಿಕೊಳ್ಳುತ್ತೇನೆ ಎಂದಿದ್ದಾರೆ ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version