ಬೆಲೆ ಏರಿಕೆಗೆ ಮೋದಿ ಸರ್ಕಾರದ ದುರಾಸೆಯೇ ಕಾರಣ: ರಮೇಶ್ ಕಾಂಚನ್ ಕಿಡಿ
ತಿಂಗಳ ಮೊದಲ ದಿನವೇ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏಕಾಏಕಿ ರೂ.50 ಏರಿಸುವ ಮೂಲಕ ಜನಸಾಮಾನ್ಯರಿಗೆ ಗಿಫ್ಟ್ ನೀಡುವ ಮೂಲಕ ಶಾಕ್ ನೀಡಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ದೇಶದ ಜನತೆ ಮತ್ತೊಮ್ಮೆ ಮೋದಿ ಸರಕಾರದ ಜನವಿರೋಧಿ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುವಂತಾಗಿದೆ. ಸದಾ ಉದ್ಯಮಿಗಳ ಪರ ನಿಲ್ಲುವ ಬಿಜೆಪಿ ಸರಕಾರಕ್ಕೆ ಎಂದಿಗೂ ಕೂಡ ಬಡ ಹಾಗೂ ಮಧ್ಯಮ ವರ್ಗದವರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಿಲ್ಲ. ಪ್ರತಿಬಾರಿಯೂ ಯಾವುದೇ ಬೆಲೆ ಏರಿಕೆ ಮಾಡಿದಾಗ ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಹಾಗೂ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಸುಳ್ಳು ಹೇಳಿಕೊಂಡು ಬಂದಿದ್ದಾರೆ.
ಪ್ರತಿಬಾರಿ ಬೆಲೆ ಏರಿಕೆಗೆ ಮೋದಿ ಸರ್ಕಾರದ ದುರಾಸೆಯೇ ಕಾರಣ ಹೊರತು ಬೇರೆನೂ ಅಲ್ಲ.
ಒಂದು ಸಿಲಿಂಡರ್ ಬೆಲೆ ಈಗಾಗಲೇ ರೂ. 1000 ದಾಟಿದೆ. ಜನರ ಸಮಸ್ಯೆಯ ಬಗ್ಗೆ ಸರಕಾರ ಗಮನಹರಿಸದಿದ್ದರೆ ಇನ್ಯಾರೂ ಚಿಂತಿಸಬೇಕು ? ಜನರ ಸಮಸ್ಯೆಗೆ ಸ್ಪಂದನೆ ನೀಡದ ಸರಕಾರ ಜನಪರ ಸರಕಾರವಾಗಲು ಹೇಗೆ ಸಾಧ್ಯ ?
ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ಮಾಡುತ್ತಿರುವ ಬಿಜೆಪಿ ಸರಕಾರ ಸಾಮಾನ್ಯ ಜನರ ಕಷ್ಟಗಳಿಗೆ ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ ಬದಲಾಗಿ ಇನ್ನಷ್ಟು ಸಮಸ್ಯೆಯನ್ನು ಜನರಿಗೆ ನೀಡುತ್ತಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು ದಿನಬಳಕೆಯ ವಸ್ತುಗಳ ಬೆಲೆಯನ್ನು ಇಳಿಸುವುದರ ಮೂಲಕ ಜನರು ನೆಮ್ಮದಿಯಿಂದ ಬದಕಲು ಅವಕಾಶ ಮಾಡಿಕೊಡಬೇಕು ಹಾಗೂ ಜನರು ಕೂಡ ಇಂತಹ ಜನವಿರೋಧಿ ಸರಕಾರದ ಧೋರಣೆಯನ್ನು ಅರ್ಥ ಮಾಡಿಕೊಂಡು ತಕ್ಕ ಪಾಠ ಕಲಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























