ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತಕ್ಕೆ ಕಾರಣ ಬಯಲು! - Mahanayaka

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತಕ್ಕೆ ಕಾರಣ ಬಯಲು!

bangalore rcb
05/06/2025

ಬೆಂಗಳೂರು:  ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ನಂಬರ್ 7ರಲ್ಲಿ ದುರಂತ ನಡೆದಿದ್ದು, 11 ಜನರು ಸಾವನ್ನಪ್ಪಿದ್ದಾರೆ. ಘಟನೆಗೆ ಕಾರಣ ಏನು ಎನ್ನುವುದರ ಬಗ್ಗೆ ವ್ಯಾಪಕ ಚರ್ಚೆಗಳು ಕೇಳಿ ಬಂದಿವೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ ಗೇಟ್ ನಂಬರ್ 7ರಲ್ಲಿ ಕ್ರೀಡಾಂಗಣ ಪ್ರವೇಶಕ್ಕೆ ಉಚಿತ ಟಿಕೆಟ್ ಸಿಗುತ್ತಿದೆ ಎನ್ನುವ ವದಂತಿ ನೂಕು ನುಗ್ಗಲಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ. ಉಚಿತ ಟಿಕೆಟ್ ಗಾಗಿ ಜನರು ನುಗ್ಗಿರುವುದು ಜನರ ಸಾವಿಗೆ ಕಾರಣವಾಗಿದೆ ಎನ್ನುವ ಅಂಶ ಇದೀಗ ಬಯಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 21 ಸ್ಟ್ಯಾಂಡ್ ಗಳಿದ್ದು,  13 ಗೇಟ್ ಗಳಿವೆ ಈ ಪೈಕಿ ಮುಖ್ಯ ಪ್ರವೇಶ ಮಾರ್ಗದ ಅಕ್ಕಪಕ್ಕದ ಗೇಟುಗಳಲ್ಲಿ ಜನರು ಕಿಕ್ಕಿರಿದು ತುಂಬಿದ್ದರು. 7ನೇ ಗೇಟ್ ಬಳಿ ಸಾವು ನೋವು ಸಂಭವಿಸಿದೆ.

ಪೊಲೀಸರು ಜನರನ್ನು ನಿಯಂತ್ರಿಸುವ ಬದಲು ತಳ್ಳಾಡುತ್ತಿದ್ದರು ಎನ್ನುವ  ಆಕ್ರೋಶ ಕೂಡ ಸಾರ್ವಜನಿಕರಿಂದ ಕೇಳಿ ಬಂದಿದೆ. ಭಾರೀ ಸಂಖ್ಯೆಯ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿತ್ತು. ಇನ್ನೊಂದೆಡೆ ಆಂಬುಲೆನ್ಸ್ ಗಳ ಸುಗಮ ಸಂಚಾರಕ್ಕೂ ಅಡ್ಡಿಯಾಗಿದ್ದು, ಸಂಜೆ 6:30ರ ವೇಳೆ ಕಬ್ಬನ್ ಪಾರ್ಕ್ ಸರ್ಕಲ್ ಬಳಿ ಪೊಲೀಸರು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ