ಕೊರಗ ಸಮುದಾಯದ ಬಂಧುಗಳ ಜೊತೆ ನಾನಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಚಿವರು, ಮಾಜಿ ಸಂಸದರು ಆದ ಜಯಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಕೊರಗ ಸಮುದಾಯದ ಮುಖಂಡರ ನಿಯೋಗದವರು ಇಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಪತ್ರ ನೀಡಿತು.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕೊರಗ ಸಮುದಾಯದ ಮುಖಂಡರ ನಿಯೋಗ ನನ್ನನ್ನು ಭೇಟಿಯಾಗಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಪತ್ರ ನೀಡಿದರು ಎಂದು ತಿಳಿಸಿದರು.
ರಾಜ್ಯದ ಕೊರಗ ಸಮುದಾಯದ ಬಂಧುಗಳ ಜೊತೆ ನಾನಿದ್ದೇನೆ. ಇಂದಿಗೂ ಮುಖ್ಯವಾಹಿನಿಯಿಂದ ಹೊರಗುಳಿದಿರುವ, ಕಡುಕಷ್ಟದಲ್ಲೇ ಬದುಕು ಸಾಗಿಸುತ್ತಿರುವ ಕೊರಗ ಸಮುದಾಯದ ಅಹವಾಲುಗಳನ್ನು ಪರಿಹರಿಸುವ ಬಗ್ಗೆ ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7