ರಾಜ್ಯದಲ್ಲಿ ಏರುತಿರುವ ಬಿಸಿಲಿನ ತಾಪ: ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ - Mahanayaka

ರಾಜ್ಯದಲ್ಲಿ ಏರುತಿರುವ ಬಿಸಿಲಿನ ತಾಪ: ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್

temparecher
04/05/2024

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಜಾಸ್ತಿಯಾಗುತ್ತಿದ್ದುಇದರಿಂದ ಜನರು ರೋಸಿ ಹೊಗಿದ್ದಾರೆ. ಬಿಸಿಲಿನ ತಾಪದಿಂದ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ರೆಡ್ ಅಲರ್ಟ್ ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರ್ಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಹಾಗೂ ಸುತ್ತಲಿನ ಪರಿಸರದಲ್ಲಿ ಗರಿಷ್ಠ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು,ಮಧ್ಯಾಹ್ನ 12 ರಿಂದ ಸಂಜೆ 3 ಗಂಟೆಯವರೆಗೆ ಹೊರಗಡೆ ಹೋಗದೆ ನೆರಳಲ್ಲಿ ಇರುವಂತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಜಿಲ್ಲೆಯ ಜನತೆಗೆ ಮನವಿ ಮಾಡಿದೆ.

ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಆಗಾಗ್ಗೆ ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಒಳಾಂಗಣದಲ್ಲೇ ಇರಬೇಕು, ವಿಶೇಷವಾಗಿ ಮಕ್ಕಳು, ಹಿರಿಯರು, ಮಧುಮೇಹ ಹಾಗೂ ಬಿಪಿ ಇರುವವರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ