ರಸ್ತೆ ಅಗೆದು ಕಂಟ್ರಾಕ್ಟರ್ ನಾಪತ್ತೆ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಶಂಕರಕೂಡಿಗೆಯಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದ್ದು, ಗ್ರಾಮದ ದ್ವಾರದಲ್ಲೇ ಚುನಾವಣೆ ಬಹಿಷ್ಕಾರದ ಬ್ಯಾನರ್ ಹಿಡಿದು ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲೆನಾಡಿನಲ್ಲಿ ಇದು ಎರಡನೇಯ ಚುನಾವಣೆ ಬಹಿಷ್ಕಾರದ ಕೂಗಾಗಿದೆ. ಶಂಕರಕೂಡಿಗೆಯಲ್ಲಿ ಕಾಂಕ್ರಿಟ್ ರಸ್ತೆಗೆ ವರ್ಷದ ಹಿಂದೆಯೇ 70 ಲಕ್ಷ ಅನುದಾನ ಬಿಡುಗಡೆಯಾಗಿದೆ. ಆದರೆ, ಕಾಮಗಾರಿಗೆ ರಸ್ತೆ ಅಗೆದ ಬಳಿಕ ಕಂಟ್ರಾಕ್ಟರ್ ನಾಪತ್ತೆಯಾಗಿದ್ದಾನೆ.
ಇದೀಗ ಅಗೆದ ರಸ್ತೆಯಲ್ಲಿ ಸಾರ್ವಜನಿಕರು ಪ್ರತಿನಿತ್ಯ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಿನ ಕಲ್ಲು ದಾರಿಯಲ್ಲಿ ಹಳ್ಳಿಗರು ಎದ್ದು ಬಿದ್ದು ಸಂಚರಿಸುವ ದುಸ್ಥಿತಿ ಸೃಷ್ಟಿಯಾಗಿದೆ. ಇದೇ ವೇಳೆ ಚುನಾವಣೆ ಆಗಮಿಸುತ್ತಿದ್ದು, ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಲು ಗ್ರಾಮಸ್ಥರು ಸಜ್ಜಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























