“ಮಾರಿಕೊಂಡವರು” ಸುಳ್ಳುಸುದ್ದಿ ಹರಡುತ್ತಿದ್ದಾರೆ: ವಾರೆಂಟ್ ಜಾರಿ  ಸುದ್ದಿಗೆ ಪ್ರಕಾಶ್ ರಾಜ್ ತಿರುಗೇಟು

prakash raj
22/06/2026

ಬೆಂಗಳೂರು: ನಟ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿರುವವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟ್ಟರ್) ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ತಮ್ಮ ವಿರುದ್ಧ ಸುಳ್ಳು ಸುದ್ದಿಗಳ ಕಾರ್ಖಾನೆಯನ್ನು ನಡೆಸುತ್ತಿರುವವರನ್ನು “ಮಾರಿಕೊಂಡವರು” (Sold out fellows) ಎಂದು ಕರೆದಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಬರೆದಿರುವ ಪ್ರಕಾಶ್ ರೈ, “ಸುಳ್ಳು ಸುದ್ದಿ ಸೃಷ್ಟಿಸುವುದರಲ್ಲಿ ಕಾರ್ಯನಿರತರಾದ ಮಾರಿಕೊಂಡವರು. ಪಾಪ, ಅವರಿಗೆ ತುಂಬಾ ನೋವಾಗಿರಬೇಕು. ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಹರಡುತ್ತಿದ್ದಾರೆ. ಆದರೆ, ನಾನು ಅವರನ್ನು ಬ್ಯುಸಿಯಾಗಿ ಇಟ್ಟಿದ್ದೇನೆ ಎಂಬುದು ನನಗೆ ಸಂತೋಷ ತಂದಿದೆ,” ಎಂದು ವ್ಯಂಗ್ಯವಾಡಿದ್ದಾರೆ.

ತಮ್ಮ ಪೋಸ್ಟ್‌ನೊಂದಿಗೆ ಕೆಲವು ಸ್ಕ್ರೀನ್‌ ಶಾಟ್‌ ಗಳನ್ನು ಹಂಚಿಕೊಂಡಿರುವ ಅವರು, #justasking ಹ್ಯಾಶ್‌ ಟ್ಯಾಗ್ ಬಳಸುವ ಮೂಲಕ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಪ್ರಕಾಶ್ ರೈ ಅವರ ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸುಳ್ಳು ಸುದ್ದಿ ಏನು?

ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು (ACJM) ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ (Non-Bailable Warrant) ಜಾರಿಗೊಳಿಸಿದೆ.  ಪ್ರಕಾಶ್ ರಾಜ್ ಅವರು ನಿಯಮಬಾಹಿರವಾಗಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ (Voter ID) ಹೊಂದಿದ್ದಾರೆ ಎಂಬ ಗಂಭೀರ ಆರೋಪ ಇವರ ಮೇಲಿದೆ ಅಂತ ಹಲವು ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದವು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version