ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 50 kmph ವೇಗದಲ್ಲಿ ಗುಡುಗು ಸಹಿತ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಜಿಲ್ಲೆಗಳಲ್ಲಿ ಸುರಕ್ಷತಾ ಕ್ರಮವಾಗಿ ಎಲೆಕ್ಟ್ರಿಕ್ ಉಪಕರಣಗಳನ್ನ ಬಂದ್ ಮಾಡುವಂತೆ ಹವಾಮಾನ ಇಲಾಖೆ ಮನವಿ ಮಾಡಿದ್ದು, ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97