ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಹುಲಿ ಪತ್ತೆ

24/11/2023
ಚಾಮರಾಜನಗರ: ಸರಹದ್ದಿನ ಕಾದಾಟದಲ್ಲಿ ಹುಲಿಯೊಂದು ತೀವ್ರವಾಗಿ ಗಾಯಗೊಂಡು ಮೇಲಕ್ಕೆ ಏಳಲಾರದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿ ಸಮೀಪ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಜನವಸತಿ ಸಮೀಪವೇ ಗಾಯಗೊಂಡ ಹುಲಿ ತೀರಾ ನಿತ್ರಾಣದ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ.
ಹುಲಿಗೆ 4 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು ಮತ್ತೊಂದು ಗಂಡು ಹುಲಿ ಜೊತೆಗಿನ ಸರಹದ್ದಿನ ಕಾದಾಟದಲ್ಲಿ ಗಾಯಗೊಂಡಿದೆ. ಹುಲಿ ಈಗಾಗಲೇ ನಿತ್ರಾಣಗೊಂಡಿರುವುದರಿಂದ ಚುಚ್ಚುಮದ್ದು ಕೊಟ್ಟು ಸೆರೆ ಹಿಡಿಯಲಾಗಲ್ಲ, ಬೋನಿನ ಮೂಲಕ ಸೆರೆ ಹಿಡಿಯಲು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಬಂಡೀಪುರ ಸಿಎಫ್ ಒ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.