4:22 AM Saturday 25 - October 2025

ಕಾದಾಟದಲ್ಲಿ ಗಾಯಗೊಂಡಿದ್ದ ಹುಲಿ ಸಾವು

tiger
24/11/2023

ಚಾಮರಾಜನಗರ: ಕಾದಾಟದಲ್ಲಿ ಗಾಯಗೊಂಡು ನಿತ್ರಾಣಗೊಂಡಿದ್ದ ಸುಮಾರು 3 ವರ್ಷದ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯ  ದೊಡ್ಡಕರಿಯಯ್ಯ ಎಂಬುವರ ಜಮೀನಿನಲ್ಲಿ ಶುಕ್ರವಾರ ನಡೆದಿದೆ.

ಕಾಡಿನೊಳಗೆ ವನ್ಯಪ್ರಾಣಿಗಳ ಕಾದಾಟದಿಂದ ಸುಮಾರು 3 ವರ್ಷದ ಗಂಡು ಹುಲಿಯ ತಲೆ ಮತ್ತು ಮೈಮೇಲೆ ತೀವ್ರ ಪೆಟ್ಟಾಗಿತ್ತು. ಇದರಿಂದ ಹುಲಿಯು ಸಂಪೂರ್ಣವಾಗಿ ನಿತ್ರಾಣಗೊಂಡು ನಡೆಯಲಾರದ ಸ್ಥಿತಿಗೆ ತಲುಪಿತ್ತು. ಇದರ ಮಾಹಿತಿ ಅರಿತ ಅರಣ್ಯ ಅಧಿಕಾರಿಗಳು ಮತ್ತು ಪಶು ವೈದ್ಯ ವಾಸಿಂ ಮಿರ್ಜಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಸೆರೆಗೂ ಮುನ್ನ ಹುಲಿ ಮರಣ ಹೊಂದಿದೆ ಎಂದು ತಿಳಿದು ಬಂದಿದೆ.

ಬಂಡೀಪುರ ಹುಲಿ ಯೋಜನೆಯ ನಿರ್ದೇಶಕರಾದ ಡಾ.ರಮೇಶ್ ಕುಮಾರ್ ಮಾರ್ಗದರ್ಶನದಲ್ಲಿ ಮೃತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನಿಯಮದಂತೆ ಕ್ರಮ ಜರುಗಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version