ದೇವರ ರಥದ ಚಕ್ರಕ್ಕೆ ಸಿಲುಕಿ ಯುವಕನ ದಾರುಣ ಸಾವು! - Mahanayaka

ದೇವರ ರಥದ ಚಕ್ರಕ್ಕೆ ಸಿಲುಕಿ ಯುವಕನ ದಾರುಣ ಸಾವು!

devendra
08/09/2024


Provided by

ವಿಜಯಪುರ:  ದೇವರ ರಥದ ಚಕ್ರದಡಿಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದ್ದು, ದೇವೇಂದ್ರ ಬಡಿಗೇರ್ (24) ಎಂಬವರು ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.

ರಥ ಎಳೆಯುತ್ತಿದ್ದ ವೇಳೆ ದೇವೇಂದ್ರ ಆಯತಪ್ಪಿ ಚಕ್ರದಡಿಗೆ ಸಿಲುಕಿದ್ದಾರೆ. ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆಯ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ