ಭಾರೀ ಗಾಳಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ
24/07/2024
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗಾಳಿ—ಮಳೆಯ ಅಬ್ಬರ ಜೋರಾಗಿದ್ದು, ಭಾರೀ ಗಾಳಿ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದ ಘಟನೆ ನಡೆದಿದ್ದು, ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರದಲ್ಲಿ ಈ ಘಟನೆ ನಡೆದಿದೆ. ಮನೆ ಗೋಡೆ ಮನೆಯ ಹೊರ ಭಾಗಕ್ಕೆ ಬಿದ್ದಿದೆ, ಒಳ ಭಾಗಕ್ಕೆ ಬಿದ್ದಿದ್ರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು.
ನಾಗೇಶ್ ಶೆಟ್ಟಿ ಎಂಬುವರ ಮನೆ ಕುಸಿದು ಬಿದ್ದ ಮನೆಯಾಗಿದೆ. ಮನೆಯ ಮುಂಭಾಗ ಸಂಪೂರ್ಣ ನಾಶವಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ ಮೇಲೆಯೇ ಮನೆ ಗೋಡೆ ಕುಸಿದು ಬಿದ್ದಿದ್ದು, ಪರಿಣಾಮವಾಗಿ ಆಟೋ ಜಖಂ ಆಗಿದೆ. ಸ್ಥಳಕ್ಕೆ ಪಂಚಾಯಿತಿ ಅಧಿಕಾರಿಗಳು, ಸದಸ್ಯರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: