ಬಾತ್ ರೂಮ್ ಗೆ ಹೋಗಿದ್ದ ಮಹಿಳೆಯ ವಿಡಿಯೋ ಮಾಡಿದ ಸೆಕ್ಯುರಿಟಿ ಗಾರ್ಡ್ ಗೆ ಹಿಗ್ಗಾಮುಗ್ಗಾ ಥಳಿತ! - Mahanayaka

ಬಾತ್ ರೂಮ್ ಗೆ ಹೋಗಿದ್ದ ಮಹಿಳೆಯ ವಿಡಿಯೋ ಮಾಡಿದ ಸೆಕ್ಯುರಿಟಿ ಗಾರ್ಡ್ ಗೆ ಹಿಗ್ಗಾಮುಗ್ಗಾ ಥಳಿತ!

veshwanath
19/04/2024

ಕಲಬುರಗಿ: ಸೆಕ್ಯುರಿಟಿ ಗಾರ್ಡ್ ವೋರ್ವ ಬಾತ್ ರೂಮ್ ಗೆ ಹೋಗಿದ್ದ ಮಹಿಳೆಯ ವಿಡಿಯೋ ಮಾಡಿರುವ ಘಟನೆ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಆರೋಪಿಯನ್ನು ವಿಶ್ವನಾಥ್ ಎಂದು ಗುರುತಿಸಲಾಗಿದೆ. ಮಹಿಳೆ ಬಾತ್ ರೂಮ್ ಹೋಗಿದ್ದಾಗ ಸೆಕ್ಯುರಿಟಿ ಗಾರ್ಡ್ ವಿಡಿಯೋ ಮಾಡಿದ್ದಾನೆ ಇದನ್ನು ಗಮನಿಸಿದ ಮಹಿಳೆ ತನ್ನ ಗಂಡನಿಗೆ ಕಾಲ್ ಮಾಡಿ ವಿಷಯ ತಿಳಿಸಿದ್ದಾಳೆ.

ಕೂಡಲೇ ಅಪಾರ್ಟ್ ಮೆಂಟ್ ಗೆ ಆಗಮಿಸಿದ ಆಕೆಯ ಗಂಡ ಹಾಗೂ ಅಪಾರ್ಟ್ ಮೆಂಟ್ ನ ನಿವಾಸಿಗಳು ಸೇರಿ ಸೆಕ್ಯುರಿಟಿ ಗಾರ್ಡ್ ನನ್ನು ಹಿಡಿದು ಥಳಿಸಿ, ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ