ಚರ್ಚಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಯುವಕ ಸಾವಿಗೆ ಶರಣು
11/10/2023
ಕೊಟ್ಟಿಗೆಹಾರ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಸಾವಿಗೆ ಶರಣಾದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರ ಚರ್ಚ್ ಆವರಣದಲ್ಲಿ ನಡೆದಿದೆ.
ಮೃತ ಯುವಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಈತ ಮೂಡಿಗೆರೆ ನಿವಾಸಿಯಾಗಿದ್ದು, ಪ್ರದೀಪ ಹಾಗೂ ಆತನ ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿದ್ದು, ಇದರಿಂದ ಬೇಸತ್ತು ಸಾವಿನ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.
ಪ್ರದೀಪ್ ಅವರ ಪತ್ನಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. ಕೊಟ್ಟಿಗೆಹಾರದ ಚರ್ಚ್ ನಲ್ಲಿ ಯಾರು ಇಲ್ಲದ ಸಮಯದಲ್ಲಿ ಚರ್ಚಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

























