ಹಳಿಗಳ ಮೇಲೆ ಓಡಾಡಿದ ಯುವಕ: ಅರ್ಧ ಗಂಟೆ ನಮ್ಮ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಯುವಕನೋರ್ವ ಹಳಿಯ ಮೇಲೆ ನಡೆದಾಡಿದ ಕಾರಣ ನಮ್ಮ ಮೆಟ್ರೋ ರೈಲು ಸೇವೆ 27 ನಿಮಿಷಗಳ ವರೆಗೆ ಸ್ಥಗಿತಗೊಂಡ ಘಟನೆ ಜ್ಞಾನಭಾರತಿ ಸ್ಟೇಷನ್ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ನಡೆದಿದೆ.
ಯುವಕ ಹಳಿಗಳ ಮೇಲೆ ಓಡಾಡುತ್ತಿರುವುದನ್ನು ಗಮನಿಸಿದ ಮೆಟ್ರೋ ಅಧಿಕಾರಿಗಳು ತಕ್ಷಣವೇ ಹೈವೋಲ್ಟೇಜ್ ವಿದ್ಯುತ್ ಸಂಪರ್ಕ ಆಫ್ ಮಾಡಿದ್ದಾರೆ. ಹೀಗಾಗಿ ಮಧ್ಯಾಹ್ನ 3 ಗಂಟೆಯಿಂದ 3:37ರವರೆಗೆ ಮೆಟ್ರೋ ಸೇವೆ ಸ್ಥಗಿತಗೊಂಡಿದೆ.
ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದಲ್ಲಿ ಸಂಚರಿಸುವ ಮೆಟ್ರೋ ಸೇವೆಗಳನ್ನು ಅರ್ಧಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.
ಮೆಟ್ರೋ ಹಳಿಗಳ ಮೇಲೆ ಓಡಾಡಿದ ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth