ಅಡ್ಡಾದಿಡ್ಡಿ ಕಾರು ಚಲಾಯಿಸಿದಲ್ಲದೇ, ಆಟೋ ಡ್ರೈವರ್ ಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ!

ಬೆಂಗಳೂರು: ಕಂಠಪೂರ್ತಿ ಕುಡಿದು ಯುವತಿಯೋರ್ವಳು ಮನಬಂದಂತೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದು, ಇದನ್ನು ಪ್ರಶ್ನಿಸಿದ ಆಟೋ ಡ್ರೈವರ್ ಗೆ ಥಳಿಸಿದ ಘಟನೆ ನಡೆದಿದೆ.
ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುವತಿ ಯುವಕನ ಮೈ ಕೂ ಪರಚಿ ಗಾಯಗೊಳಿಸಿದ್ದಾಳೆ, ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾಳೆ.
ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿರುವುದನ್ನು ಕಂಡು ಆಟೋ ಡ್ರೈವರ್ ಪ್ರಶ್ನಿಸಿದ್ದರು. ಈ ವೇಳೆ ಕೋಪಗೊಂಡ ಯುವತಿ ಆಟೋ ಡ್ರೈವರ್ ಮೇಲೆ ತಿರುಗಿಬಿದ್ದಿದ್ದು, ಕಾರ್ ನಿಲ್ಲಿಸಿ ಆಟೋ ಡ್ರೈವರ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth