ತಹಶೀಲ್ದಾರ್ ಕಾರನ್ನು ಓವರ್ ಟೇಕ್ ಮಾಡಿದ ಯುವಕರಿಗೆ ಹಿಗ್ಗಾಮುಗ್ಗಾ ಹಲ್ಲೆ! - Mahanayaka
8:40 PM Thursday 20 - November 2025

ತಹಶೀಲ್ದಾರ್ ಕಾರನ್ನು ಓವರ್ ಟೇಕ್ ಮಾಡಿದ ಯುವಕರಿಗೆ ಹಿಗ್ಗಾಮುಗ್ಗಾ ಹಲ್ಲೆ!

23/01/2024

ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತಹಶೀಲ್ದಾರ್ ಕಾರನ್ನು ಓವರ್ ಟೇಕ್ ಮಾಡಿದ ಎಂಬ ಕ್ಷುಲಕ ಕಾರಣಕ್ಕೆ ಆತನನ್ನು ನಡು ರಸ್ತೆಯಲ್ಲಿ ತಡೆದು ಮನಬಂದಂತೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಧವ್ ಗಢದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ ಡಿಎಂ) ಮತ್ತು ತಹಸೀಲ್ದಾರ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಕಾಂಗ್ರೆಸ್ ನಾಯಕ ವಿವೇಕ್ ಟಂಖಾ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿಡಿಯೋ ವೈರಲ್ ಆಗಿದ್ದು, ಯುವಕರ ಗುಂಪೊಂದು ಮ್ಯಾಜಿಸ್ಟ್ರೇಟ್ (ಎಸ್ ಡಿಎಂ) ವಾಹನವನ್ನು ಓವರ್ ಟೇಕ್ ಮಾಡಲು ಮುಂದಾದಾಗ ಇವರ ನಡುವೆ ಗಂಭೀರ ವಾಗ್ವಾದಕ್ಕೆ ಕಾರಣವಾಯಿತು. ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಯುವಕರ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದಾಗಿ ಯುವಕರ ತಲೆಗೆ ಗಾಯಗಳಾಗಿವೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಸಿಎಂ, ಮಧ್ಯಪ್ರದೇಶದಲ್ಲಿ ಉತ್ತಮ ಆಡಳಿತವಿದೆ, ಇಂತಹ ಅಮಾನವೀಯ ಘಟನೆಯನ್ನು ಸಹಿಸುವುದಿಲ್ಲ, ಅಧಿಕಾರಿಗಳು ನಡೆಸಿದ ಹಲ್ಲೆ ದುರಾದೃಷ್ಟಕರ ಎಂದು ಅವರು ಹೇಳಿದ್ದಾರೆ.

 

 

ಇತ್ತೀಚಿನ ಸುದ್ದಿ