ಹ್ಯಾಂಡಲ್ ಲಾಕ್ ಮುರಿದು 7 ದ್ವಿಚಕ್ರ ವಾಹನಗಳ ಕಳವು: ಇಬ್ಬರು ಆರೋಪಿಗಳು ಅರೆಸ್ಟ್

arrest
28/06/2023

ಹ್ಯಾಂಡಲ್ ಲಾಕ್ ಮುರಿದು 7 ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದ ಆರೋಪಿಗಳ ಬಂಧಿಸಿರುವ ಪಶ್ಚಿಮ ವಿಭಾಗ ಕೆಂಗೇರಿ ಉಪ–ವಿಭಾಗ, ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸರು ಒಟ್ಟು  6,50,000/-ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ.

ಜ್ಞಾನಭಾರತಿ ಪೊಲೀಸ್‌ ಠಾಣೆಯ ಸರಹದ್ದಿನಲ್ಲಿ, ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನವನ್ನು ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಆರೋಪಿಗಳ ಮಾಹಿತಿ ಮೇರೆಗೆ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಾದ ಬ್ಯಾಡರಹಳ್ಳಿ, ಮಾಗಡಿ ರಸ್ತೆ, ವಿಜಯನಗರ ಮತ್ತು ಚಂದ್ರಲೇಔಟ್ ತಲಾ ಒಂದು ಪ್ರಕರಣಗಳು ಹಾಗೂ ಜ್ಞಾನಭಾರತಿ ಪತ್ತೆಯಾಗಿರುತ್ತವೆ.

ಠಾಣೆಯ ಮೂರು ದ್ವಿಚಕ್ರ ವಾಹನಗಳ ಪ್ರಕರಣಗಳ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್  ಡಾ.ಲಕ್ಷ್ಮಣ ನಿಂಬರಗಿ, ರವರ ಸೂಕ್ತ ಮಾರ್ಗದರ್ಶನದಲ್ಲಿ, ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್  ಹೆಚ್.ಎಸ್.ಪರಮೇಶ್ವರ್ ನಿರ್ದೇಶನದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುಬ್ರಮಣಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version