5:30 PM Saturday 25 - October 2025

ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳವು ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್

dharmasthala
25/11/2023

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದಾರೆ.

ಈ ‌ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಜಯ್ ಶೆಟ್ಟಿ (32),  ಸೂರಜ್ ಶೆಟ್ಟಿ(23),  ಮಂಜುನಾಥ ಪೂಜಾರಿ(30), ಕಿಶೋರ್. ಟಿ (32) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನ. 9 ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್ ಎಂಬುವವರ ಅಕ್ಕನ ಮಗ ನೌಫಲ್ ಎಂಬವರು ತಮ್ಮ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡ ತಂಡ ಧರ್ಮಸ್ಥಳ ಎಸ್ ಐ ಅನಿಲ್ ಕುಮಾರ್ ನೇತೃತ್ವದ ತಂಡ ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಇದೀಗ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version