ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ನೇಣು ಕುಣಿಕೆಗಳನ್ನು ಕೈಯಲ್ಲಿ ಹಿಡಿದುಕೊಂಡು ರೈತರ ಪ್ರತಿಭಟನೆ!

25/08/2023
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ರೈತರು ಶ್ರೀರಂಗಪಟ್ಟಣದಲ್ಲಿ ರೈತರು ನೇಣು ಕುಣಿಕೆಗಳನ್ನು ಕೈಯಲ್ಲಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.
ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು, ಡ್ಯಾಮ್ ಭರ್ತಿಯಾಗದಿದ್ದರೂ ತಮಿಳುನಾಡಿಗೆ ನೀರು ಬಿಟ್ಟಿರುವ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು.
ಗ್ಯಾರೆಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸರ್ಕಾರ ರೈತರಿಗೆ ನೇಣು ಭಾಗ್ಯ ನೀಡುತ್ತಿದೆ. ತಮಿಳುನಾಡಿಗೆ ನೀರು ಹರಿಸೋದನ್ನ ನಿಲ್ಲಿಸದಿದ್ದರೆ, ಸಾಮೂಹಿಕ ಆತ್ಮಹತ್ಯೆಗೆ ಶರಣಾಗ್ತೇವೆ ಅಂತ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.