ಶಾಸಕ ಪೂಂಜಾ ಮುಸ್ಲಿಮರ ಬಗ್ಗೆ ಅವಹೇಳನಕಾರಿ ಭಾಷಣ: ತೆಕ್ಕಾರಿನ ಗೋಪಾಲಕೃಷ್ಣ ದೇವಾಲಯ ಆಡಳಿತ ಮಂಡಳಿಯಿಂದ ವಿಷಾದ

ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ಬಗ್ಗೆ ಅವಹೇಳನಾಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮುಸ್ಲಿಮ್ ಮುಖಂಡರ ಜೊತೆಗೆ ದೇವಸ್ಥಾನದ ಆಡಳಿತ ಮಂಡಳಿ ಸಭೆ ನಡೆಸಿದ ಬಳಿಕ ಶ್ರೀ ಗೋಪಾಲ ಕೃಷ್ಣ ಭಟ್ರಬೈಲು, ದೇವರ ಗುಡ್ಡೆ ಸೇವಾ ಟ್ರಸ್ಟ್ ಮುಸ್ಲಿಮ್ ಒಕ್ಕೂಟಕ್ಕೆ ಪತ್ರ ಬರೆದು ಘಟನೆಗ ವಿಷಾದ ವ್ಯಕ್ತಪಡಿಸಿದೆ.
ಧಾರ್ಮಿಕ ಸಭಾ ಕಾರ್ಯಕ್ರಮದ ಬಗ್ಗೆ ನಮ್ಮ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಡಿರುವ ಕೆಲವೊಂದು ಮಾತುಗಳು ಗ್ರಾಮಸ್ಥರ ಮನಸ್ಸಿಗೆ ಬೇಸರ ತಂದಿದ್ದಾರೆ. ಇದಕ್ಕೆ ದೇವಸ್ಥಾನದ ಆಡಳಿತ ಮಂಡಳಿಯಿಂದ ವಿಷಾದ ವ್ಯಕ್ತಪಡಿಸುತ್ತದೆ. ಹಾಗೆಯೇ ನಿಮ್ಮ ಸಮುದಾಯದ ಸಹಕಾರವನ್ನು ಆಡಳಿತ ಮಂಡಳಿಯವರು ಸ್ವಾಗತಿಸುತ್ತೇವೆ. ಮುಂದೆಯೂ ಸಹ ಎಲ್ಲ ಸಮುದಾಯದವರು ಒಬ್ಬರಿಗೊಬ್ಬರು ಸಹಕಾರದೊಂದಿಗೆ ಬದುಕಬೇಕೆಂಬುವುದೇ ನಮ್ಮ ಆಶಯ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಮೇ 3ರಂದು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಥಳೀಯ ಶಾಸಕ ಹರೀಶ್ ಪೂಂಜಾ, ಸೌಹಾರ್ದಯುತ ಕಾರ್ಯಕ್ರಮದಲ್ಲಿ ಕೋಮುವಾದದ ಭಾಷಣ ನಡೆಸಿದ್ದರು.
“ತೆಕ್ಕಾರಿನ ಕಂಡ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಹೊಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಾರೆ” ಎಂದು ಅವಹೇಳನಾಕಾರಿಯಾಗಿ ಹರೀಶ್ ಪೂಂಜಾ ಭಾಷಣ ಮಾಡಿದ್ದರು.
ಹಿಂದೂ ಮುಸ್ಲಿಮರ ಪರಸ್ಪರ ಸಹಕಾರದೊಂದಿಗೆ ನಡೆಯುತ್ತಿದ್ದ ಸೌಹಾರ್ದಯುತವಾದ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ರೀತಿಯ ಹೇಳಿಕೆ ನೀಡಿರುವುದು ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಕೂಡ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: