10:32 AM Saturday 23 - August 2025

ತೆನೆ ಇಳಿಸಿ, ಕೈ ಹಿಡಿಯುತ್ತಾರಾ ಜಿ.ಟಿ.ದೇವೇಗೌಡ? | ಅವಮಾನಗಳಿಂದ ಬೇಸತ್ತು ಜೆಡಿಎಸ್ ಬಿಡಲು ತೀರ್ಮಾನ!

g t devegowda
24/08/2021

ಮೈಸೂರು:  ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಇಂದು ಜಿ.ಟಿ.ದೇವೇಗೌಡ ಅವರು ಸುಳಿವು ನೀಡಿದ್ದಾರೆ. ತನಗೆ ಜೆಡಿಎಸ್ ಪಕ್ಷದಲ್ಲಿ ಸಾಕಷ್ಟು ಅವಮಾನಗಳಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ನನಗೆ ಸಾಕಷ್ಟು ಅಪಮಾನವಾಗಿದೆ. ಹಾಗಾಗಿ ಜೆಡಿಎಸ್ ನಲ್ಲಿರಲು ಸಾಧ್ಯವಿಲ್ಲ. ಪಕ್ಷದ ವರಿಷ್ಠರಾದ ದೇವೇಗೌಡರಿಗೆ ಸಂದೇಶ ತಲುಪಿಸಿ ನನ್ನನ್ನು ಕ್ಷಮಿಸಿ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇನ್ನೂ ದೇವೇಗೌಡರ ಜೊತೆಗೆ ಮಾತನಾಡಿದ ಸಂದರ್ಭದಲ್ಲಿ, ನೀನು ಮರಿ ದೇವೇಗೌಡ. ನನ್ನೊಂದಿಗೆ ಇರು ಎಂದು ಗೌಡರು ತಿಳಿಸಿದ್ದರು. ನನಗೆ ನೀವು ದೇವರ ಸಮಾನ ಎಂದು ಅವರಿಗೆ ಹೇಳಿದ್ದೇನೆ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ಆದ ಅಪಮಾನಗಳ ಬಗ್ಗೆ ದೇವೇಗೌಡರ ಜೊತೆ ಹೇಳಿಕೊಂಡಿದ್ದೇನೆ. ಪಕ್ಷ ಬಿಡುವ ತನ್ನ ತೀರ್ಮಾನಕ್ಕಾಗಿ ತನ್ನನ್ನು ದಯವಿಟ್ಟು ಕ್ಷಮಿಸಿ ಎಂದು ತಿಳಿಸಿದ್ದೇನೆ. ನನ್ನೊಂದಿಗೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮಾತನಾಡಿದ್ದಾರೆ ಎಂದಿದ್ದೇನೆ. ಕಾಂಗ್ರೆಸ್ ನಲ್ಲಿ ಒಡಕಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು…

 

“ನನ್ನನ್ನು ಮದುವೆಗೆ ಯಾಕೆ ಕರೆದಿಲ್ಲ” ಎಂದು ಪ್ರಶ್ನಿಸಿ ನವವಿವಾಹಿತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕ!

ಮೊಮ್ಮಗಳಿಗೆ ಮೇಕೆ ಗುದ್ದಿದ್ದನ್ನು ಪ್ರಶ್ನೆ ಮಾಡಲು ಹೋದ ವೃದ್ಧ ದಾರುಣ ಸಾವು!

ಈ ಬಾರಿ ಆನ್ ಲೈನ್ ನಲ್ಲೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ: ಸಚಿವ ಬಿ.ಶ್ರೀರಾಮುಲು

ಆಟೋ ಚಾಲಕನಿಗೆ ಪೊಲೀಸರ ಎದುರೇ ಚಪ್ಪಲಿಯಿಂದ ಹೊಡೆದ ಮಹಿಳೆ | ಆಟೋ ಚಾಲಕ ಮಾಡಿದ್ದೇನು ಗೊತ್ತಾ?

ಗುಂಪುಗೂಡಬಾರದು ಎನ್ನುತ್ತಲೇ ಬಿಜೆಪಿ ಜನಾಶೀರ್ವಾದ ಜಾತ್ರೆಯ ಬಗ್ಗೆ ಮೌನ ವಹಿಸಿದ ಸಿಎಂ ಬೊಮ್ಮಾಯಿ

ಸೊಸೆಯನ್ನು ಕೆಂಡದ ಮೇಲೆ ನಡೆಸಿದ ಅತ್ತೆ! | ಅತ್ತೆಯ ಅಮಾನವೀಯ ಕೃತ್ಯಕ್ಕೆ ಸೊಸೆ ಹೇಳಿದ್ದೇನು ಗೊತ್ತೇ?

ಬಾರ್ ಮುಂದೆ ವೀರವನಿತೆಯರ ಪಡೆ ಕಂಡು ಬೆಚ್ಚಿಬಿದ್ದ ಕುಡುಕರು | ಮುಂದೆ ನಡೆದದ್ದೇನು ಗೊತ್ತಾ?

ಇತ್ತೀಚಿನ ಸುದ್ದಿ

Exit mobile version