ಜೈಲಿನಲ್ಲಿ ಸ್ಥಳಾವಕಾಶದ ಕೊರತೆ ಇದೆ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಕರ್ನಾಟಕದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಕಾರಾಗೃಹಗಳ ಬಗ್ಗೆ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸನ್ನಡತೆ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ. ಕೈದಿಗಳಲ್ಲಿ ಮನಸ್ಸು ಬದಲಾವಣೆಗೆ ಕ್ರಮವಹಿಸಲಾಗಿದೆ.
ಕೌನ್ಸಿಲರ್ ಗಳ ನೇಮಕ ಮಾಡಲಾಗುತ್ತಿದೆ. ಕೈದಿಗಳಿಗೆ ಜೈಲಿನಲ್ಲಿ ಅನೇಕ ವೃತ್ತಿಗಳಿಗೆ ತರಬೇತಿ ಕೊಡಲಾಗುತ್ತದೆ. ವಿದ್ಯಾವಂತರು ಇವತ್ತು ಬೇರೆ ಬೇರೆ ಕಾರಣಕ್ಕೆ ಜೈಲಿನಲ್ಲಿ ಇದ್ದಾರೆ. ಅವರಿಗೆ ತಂತ್ರಜ್ಞಾನಾಧಾರಿತ ತರಬೇತಿ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದರು.
ಕಾರಾಗೃಹಗಳಲ್ಲಿ ಸ್ಥಳಾವಕಾಶಕ್ಕಿಂತ ಹೆಚ್ಚು ಕೈದಿಗಳಿದ್ದಾರೆ. ರಾಜ್ಯದಲ್ಲಿ 54 ವಿವಿಧ ಮಾದರಿಯ ಕಾರಾಗೃಹಗಳಿವೆ. ಇದರಲ್ಲಿ 28 ಕಾರಾಗೃಹಗಳಲ್ಲಿ ಸ್ಥಳಾವಕಾಶಕ್ಕಿಂತ ಹೆಚ್ಚು ಕೈದಿಗಳನ್ನು ಇರಿಸಲಾಗಿದೆ ಎಂದರು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























