ಪ್ರಜ್ವಲ್ ರೇವಣ್ಣ ವಿರುದ್ಧ ವಾರೆಂಟ್ ಇದೆ, ಹಾಗಾಗಿ ಬಂಧಿಸಲೇ ಬೇಕಿದೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ವಿವಿಧ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣವಿರುದ್ಧ ವಾರೆಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರ ಬಂಧನ ಮಾಡಲೇಬೇಕಿರುತ್ತದೆ, ಅದನ್ನು ಎಸ್ ಐಟಿಯವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎಸ್ ಐಟಿ ಅವರು ಪ್ರಜ್ವಲ್ ರೇವಣ್ಣ ಬರುವಿಕೆಗಾಗಿ ಕಾಯುತ್ತಿದ್ದಾರೆ. ಅವರನ್ನು ಬಂಧಿಸಬೇಕಾಗಿದೆ ಅಲ್ಲದೆ ಅವರಿಂದ ಹೇಳಿಕೆಗಳನ್ನು ಪಡೆಯಬೇಕಾಗಿದೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಎಂಬುದನ್ನು ಪರಿಗಣಿಸಿಲ್ಲ, ಬದಲಾಗಿ ಅಗತ್ಯವಿರುವವರನ್ನು ಬಂಧಿಸಲೇ ಬೇಕಿರುವುದರಿಂದ ಎಸ್ ಐಟಿ ಕ್ರಮ ತೆಗೆದುಕೊಂಡಿದೆ ಎಂದು ಹೇಳಿದರು .
ಇದುವರೆಗೂ ಹನ್ನೊಂದು ಮಂದಿಯನ್ನು ಬಂಧಿಸಲಾಗಿದೆ ಅಲ್ಲದೆ ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಎಸ್ ಐಟಿ ವಶಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97