ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - Mahanayaka

ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

math bette
25/04/2023


Provided by

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹವೇ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆಗಳನ್ನ ನೀಡಿದ್ದಾರೆ. ಪ್ರಧಾನಿಯಿಂದ ಹಿಡಿದ ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದು ಕೆಲವು ಕಾರ್ಯಕ್ರಮಗಳನ್ನು ಇಂದು ರಾತ್ರಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಮಾಡಿರುವ ಆರೋಪ ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ. ಸಿದ್ಧರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ ಎಂದರು.

ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್:

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್, ಅವರುvಮಾತನಾಡೋದು ಹಾಸ್ಯಾಸ್ಪದವಾಗಿ ಕಾಣಿಸುತ್ತದೆ. ಅವರ ಎಷ್ಟು ಜನ ನಾಯಕರು ಜೈಲಿಗೆ ಹೋಗಿದ್ದಾರೆ, ಜಾಮೀನಿನ ಮೇಲೆ ಹೊರ ಬಂದಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದರು.

ಇತ್ತೀಚಿನ ಸುದ್ದಿ