ರನ್ಯಾ ರಾವ್ ಸಂಸ್ಥೆಗೆ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಮಾಜಿ ಸಚಿವ ಮುರುಗೇಶ ನಿರಾಣಿ ಸ್ಪಷ್ಟನೆ - Mahanayaka

ರನ್ಯಾ ರಾವ್ ಸಂಸ್ಥೆಗೆ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಮಾಜಿ ಸಚಿವ ಮುರುಗೇಶ ನಿರಾಣಿ ಸ್ಪಷ್ಟನೆ

murugesh nirani
11/03/2025


Provided by

ಬೆಂಗಳೂರು: ನಟಿ ರನ್ಯಾರಾವ್ ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆ ಕುರಿತ ವಿವಾದಕ್ಕೆ ಕೈಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ.


Provided by

ರನ್ಯಾ ರಾವ್ ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಅದಕ್ಕಾಗಿಯೇ ಪ್ರತ್ಯೇಕ ಸಮಿತಿ ಇದ್ದು, ಆ ಸಮಿತಿಯಲ್ಲೇ ಆದ ನಿರ್ಧಾರದಂತೆ ಹಂಚಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರನ್ಯಾ ರಾವ್ ಎಂಬ ಉದ್ಯಮಿ 2022ರಲ್ಲಿ 12 ಎಕರೆ ಭೂಮಿ ಬೇಕೆಂದು ಅರ್ಜಿ ಕೊಟ್ಟಿದ್ದರು. 2023ರ ಜನವರಿಯಲ್ಲಿ ಅದು ಕ್ಲಿಯರ್ ಆಗಿದೆ. ಇದರಲ್ಲಿ ಕೈಗಾರಿಕಾ ಸಚಿವರದ್ದಾಗಲಿ, ನಮ್ಮ ಹಿರಿಯ ಅಧಿಕಾರಿಗಳದ್ದಾಗಲಿ ಯಾವುದೇ ರೀತಿಯ ಕಾನೂನು ಲೋಪದೋಷಗಳಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Provided by

ಅವರ ಪರವಾಗಿ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಯಾವುದೇ ರೀತಿಯ ಅನುಮಾನಗಳಿದ್ದರೆ ನನ್ನನ್ನು ನೇರವಾಗಿ ಸಂಪರ್ಕ ಮಾಡಬಹುದು ಎಂದರು. ನಾನು ಕೈಗಾರಿಕಾ ಸಚಿವನಾಗಿದ್ದ ಅವಧಿಯಲ್ಲಿ ಕಾನೂನು ಪ್ರಕಾರ, ಜಮೀನು ಮಂಜೂರು ಮಾಡಲಾಗಿತ್ತು. 2022ರಲ್ಲಿ 12 ಎಕರೆ ಜಮೀನಿಗಾಗಿ ಮನವಿ ಸಲ್ಲಿಸಿದ್ದರು.

ತುಮಕೂರು ಜಿಲ್ಲೆ ಶಿರಾ ಕೈಗಾರಿಕಾ ಪ್ರದೇಶದಲ್ಲಿನ ಜಮೀನಿನಲ್ಲಿ 138 ಕೋಟಿ ರು. ವೆಚ್ಚದ ಕಬ್ಬಿಣದ ಟಿಎಂಟಿ ಬಾರ್ ಮತ್ತು ಕಬ್ಬಿಣ ಉತ್ಪನ್ನ ಉತ್ಪಾದಿಸುವ ಕಾರ್ಖಾನೆ ಆರಂಭಿಸಲಾಗುವುದು. 160 ಜನರಿಗೆ ಉದ್ಯೋಗ ಸಿಗಲಿದೆಯೆಂದು ತಿಳಿಸಿದ್ದರು. 30 ಅಧಿಕಾರಿಗಳ ತಂಡವು ಸಾಧಕ–ಬಾಧಕ ಅಂಶಗಳನ್ನು ಚರ್ಚಿಸಿ, ಜಮೀನು ಮಂಜೂರು ಮಾಡಿತ್ತು ಎಂದು ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ