ನಿತ್ಯ ಜೊತೆಗೆ ವ್ಯಾಪಾರ ಮಾಡ್ತಿದ್ದರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಚಿಕ್ಕಬಳ್ಳಾಪುರ: ಇಬ್ಬರು ಹಣ್ಣಿನ ವ್ಯಾಪಾರಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ದುರಂತ ಅಂತ್ಯ ಕಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ಅರ್ಬಾಜ್ ಎಂಬಾತ ಕೊಲೆಯಾದ ಹಣ್ಣಿನ ವ್ಯಾಪಾರಿಯಾಗಿದ್ದು, ಫರ್ಹಾದ್ ಕೊಲೆ ಆರೋಪಿಯಾಗಿದ್ದಾನೆ. ಈತನನ್ನ ಪೊಲೀಸರು ಬಂಧಿಸಿದ್ದಾರೆ.
ವರದಿಗಳ ಪ್ರಕಾರ, ಚಿಂತಾಮಣಿ ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಇವರಿಬ್ಬರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿತ್ಯವೂ ಒಬ್ಬರಿಗೊಬ್ಬರು ಕಾಲೆಳೆಯುತ್ತಿದ್ದರು. ಆದ್ರೆ, ನಿನ್ನೆ ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ. ಈ ವೇಳೆ ಫರ್ಹಾದ್, ಅರ್ಬಾಜ್ ಮೇಲೆ ಕತ್ತರಿಯಿಂದ ಇರಿದಿದ್ದಾನೆ. ಇದರಿಂದ ರೊಚ್ಚಿಗೆದ್ದ ಫರ್ಹಾದ್ ಸೀದಾ ಕತ್ತರಿಯಿಂದ ಅರ್ಬಾಜ್ ನ ಕುತ್ತಿಗೆಗೆ ಇರಿದಿದ್ದಾನೆ. ಪರಿಣಾಮವಾಗಿ ಆತ ರಕ್ತಸ್ರಾವವಾಗಿ ಅಲ್ಲೇ ಕುಸಿದು ಬಿದ್ದಿದ್ದ ಅರ್ಬಾಜ್ ನನ್ನ ಎದುರಲ್ಲೇ ಇರುವ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪ್ರಾಣ ಬಿಟ್ಟಿದ್ದಾನೆ. ಸದ್ಯ ಚಿಂತಾಮಣಿ ನಗರ ಪೊಲೀಸರು ಆರೋಪಿ ಫರ್ಹಾದ್ ನನ್ನ ಬಂಧಿಸಿದ್ದಾರೆ.
ನಿತ್ಯ ಜೊತೆಗೇ ಕುಳಿತು ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿ ಒಬ್ಬ ಸಾವನ್ನಪ್ಪಿದ್ದರೆ, ಮತ್ತೊಬ್ಬರ ಜೈಲು ಪಾಲಾಗಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD