ಬಿಜೆಪಿಗೆ ಮರಳಿ ಸೇರಿಸಿಕೊಳ್ಳುತ್ತಾರೆ, ಶಕ್ತಿ ಇದ್ದರೆ ಎಲ್ಲರೂ ಕರೀತಾರೆ: ಯತ್ನಾಳ್

ವಿಜಯಪುರ: ಬಿಜೆಪಿಯಿಂದ ಉಚ್ಛಾಟನೆ ಆಗಿದ್ದೀನಿ 18 ವರ್ಷ ಪಕ್ಷಕ್ಕೆ ಸೇರಿಸಿಕೊಳ್ಳಬೇಕು, ಆದರೆ ನೋಡಿ 2 ತಿಂಗಳಲ್ಲಿ ಮತ್ತೆ ಬಿಜೆಪಿಗೆ ಮರಳಿ ಸೇರಿಸಿಕೊಳ್ಳುತ್ತಾರೆ ಎಂದು ಇತ್ತೀಚೆಗೆ ಬಿಜೆಪಿಯಿಂದ ಉಚ್ಛಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟನೆ ಆಗಿರೋದು ನಾನು. ಹಾಗೇ ನೋಡಿದ್ರೆ 18 ವರ್ಷ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು. ಆದ್ರೆ ನೋಡಿ 2 ತಿಂಗಳಲ್ಲಿ ಮತ್ತೆ ಮರಳಿ ನನ್ನನ್ನ ಸೇರಿಸಿಕೊಳ್ತಾರೆ. ನಮಗೆ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ ಎಂದರು.
ಶಕ್ತಿ ಇಲ್ಲ ಅಂದ್ರೆ ಅಪ್ಪಾಜಿ ಎನ್ನುತ್ತ ಯಡ್ಡಿಯೂರಪ್ಪ, ವಿಜಯೇಂದ್ರ ಕೈ, ಕಾಲು ಹಿಡಿಯಬೇಕಾಗುತ್ತೆ ಎಂದು ಯಡಿಯೂರಪ್ಪ ಬಣದ ನಾಯಕರನ್ನು ವ್ಯಂಗ್ಯವಾಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD