ದೇಗುಲದಲ್ಲಿ ಕಳ್ಳತನ ಮಾಡಿ ತಪ್ಪಿಸಿಕೊಳ್ಳುವ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಕಳ್ಳ: ಕೊನೆಗೆ ಆಗಿದ್ದೇ ಸಿನಿಮಾ!
ಪಶ್ಚಿಮ ಬಂಗಾಳದ ಹೂಗ್ಲಿಯ ದೇವಾಲಯದಿಂದ ಪಾತ್ರೆಗಳು, ಒಲೆ ಮತ್ತು ಗ್ಯಾಸ್ ಸಿಲಿಂಡರ್ ಅನ್ನು ಕದ್ದ ಇಬ್ಬರು ಕಳ್ಳರಲ್ಲಿ ಓರ್ವನನ್ನು ಬೆನ್ನಟ್ಟುತ್ತಿದ್ದಂತೆ ಪ್ರಜ್ಞೆ ತಪ್ಪಿದ ನಂತರ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಹೂಗ್ಲಿ ಜಿಲ್ಲೆಯ ಚುಚುರಾ ಪ್ರದೇಶದ ದೇವಾಲಯದಿಂದ ಕಳ್ಳತನ ಮಾಡಿದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದ ವ್ಯಕ್ತಿಯನ್ನು ನೋಡಿ ಸ್ಥಳೀಯರು ಆಶ್ಚರ್ಯಚಕಿತರಾದರು.
ಈ ಘಟನೆಯ ಕುರಿತು ಸ್ಥಳೀಯರು ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ತಲುಪಿದರು ಮತ್ತು ಪ್ರಜ್ಞಾಹೀನ ಕಳ್ಳನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಕಳ್ಳನಿಗೆ ಪ್ರಜ್ಞೆ ಬಂದು ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ, ಪೊಲೀಸರು ಆತನನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.
ಮೂಲಗಳ ಪ್ರಕಾರ, ಆ ವ್ಯಕ್ತಿಯು ವಾಸ್ತವವಾಗಿ ಅಪಸ್ಮಾರ ರೋಗಿಯಾಗಿದ್ದನೆಂದು ತನಿಖೆಯಿಂದ ತಿಳಿದುಬಂದಿದೆ. ಮತ್ತು ಜನರ ದೊಡ್ಡ ಗುಂಪು ಆತನನ್ನು ಬೆನ್ನಟ್ಟಿದಾಗ ಆತ ಹೆದರಿಕೊಂಡಿದ್ದರಿಂದ ಆತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.
ಕಳ್ಳರು ಮಾದಕ ದ್ರವ್ಯಗಳಿಗೆ ವ್ಯಸನಿಯಾಗಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಇಬ್ಬರೂ ಆರೋಪಿಗಳು ಉತ್ತರ 24 ಪರಗಣದ ನೈಹಾಟಿ ನಿವಾಸಿಗಳಾಗಿದ್ದು, ಚುಚುರಾದ ಮನೆಗಳು ಮತ್ತು ದೇವಾಲಯಗಳಿಂದ ಕಳ್ಳತನ ಮಾಡುವ ಉದ್ದೇಶದಿಂದ ಹೂಗ್ಲಿಗೆ ಬಂದಿದ್ದರು.
ಆದರೆ, ದೇವಾಲಯದಿಂದ ಕಳ್ಳತನ ಮಾಡಿದ ನಂತರ ಓರ್ವನನ್ನು ರೆಡ್ ಹ್ಯಾಂಡೆಡ್ ಆಗಿ ಸೆರೆಹಿಡಿಯಲಾಯಿತು. ಮತ್ತೊಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj