ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ್ದ ಕಳ್ಳನ ಬಂಧನ

ಬೆಂಗಳೂರು:ಮನೆ ಬೀಗ ಮುರಿದು ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿದ್ದ ಕಳ್ಳನನ್ನು ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ರಾಮಸ್ವಾಮಿ ಅಲಿಯಾಸ್ ವಡಿವೇಲು ರಾಮಸ್ವಾಮಿ ಬಂಧಿತ ಆರೋಪಿ. ಅಮರನಾಥ ಯಾತ್ರೆಗೆಂದು ಹೋಗಿದ್ದ ಯಾತ್ರಿಕನ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಅರ್ಧ ಕೆಜಿಗೂ ಅಧಿಕ ಚಿನ್ನ ಹಾಗೂ ಹಣವನ್ನು ಕದ್ದು ಆರೋಪಿ ಪರಾರಿಯಾಗಿದ್ದ. ನಗರದಲ್ಲಿ ಖಾಲಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನಯ ಕದ್ದ ಮಾಲು ಸಹಿತ ಪೊಲೀಸರು ಬಂಧಿಸಿದ್ದಾರೆ.
ಈ ಕಳ್ಳ ರಾಮಸ್ವಾಮಿ ಬೀಗ ಹಾಕಿರುತ್ತಿದ್ದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ. ತಡರಾತ್ರಿಯಲ್ಲಿ ಏರಿಯಾಗಳಲ್ಲಿ ರೌಂಡ್ಸ್ ಹೊಡೆದು ಯಾವ ಮನೆಯಲ್ಲಿ ಲೈಟ್ ಆಫ್ ಆಗಿರುತ್ತೋ ಆ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ. ಎರಡು ದಿನಗಳ ಕಾಲ ಮನೆಗಳನ್ನು ಸರಿಯಾಗಿ ಗಮನಿಸಿ ಮನೆಯಲ್ಲಿ ಯಾರೂ ಇಲ್ಲ ಎಂದು ಗೊತ್ತಾದಮೇಲೆ ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದನು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw