ಮೇಯುತ್ತಿದ್ದ ಕುರಿಗಳನ್ನು ಕದಿಯುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಕಳ್ಳರು!

kottigehara
19/03/2024

ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿ ಅಪರಿಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಶಿವಮೊಗ್ಗ ಮೂಲದ ಭದ್ರಾವತಿಯ ಜಬೀವುಲ್ಲಾ ಮತ್ತು  ಕುಟುಂಬದವರು ಕಾರಲ್ಲಿ ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಸಮೀಪ ಮೇಯುತ್ತಿದ್ದ ಮೊಹಮ್ಮದ್ ಎಂಬುವವರ 5 ಕುರಿಗಳನ್ನು ಕಾರಿನಲ್ಲಿ ತುಂಬಿದಾಗ ಸ್ಥಳೀಯರೊಬ್ಬರು ಕುರಿ ಮಾಲೀಕರಿಗೆ  ಮಾಹಿತಿ ನೀಡಿದ್ದು, ವಿಷಯ ತಿಳಿದ ಸ್ಥಳೀಯರು ಜಮಾಯಿಸಿ  ಆರೋಪಿ ಜಬೀವುಲ್ಲಾನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಸಬ್ ಇನ್ ಸ್ಪೆಕ್ಟರ್ ಕೌಶಿಕ್, ಪೊಲೀಸ್ ಸಿಬ್ಬಂದಿ ಜಗದೀಶ್ ಮತ್ತಿತರ ಸಿಬ್ಬಂದಿಗಳು ಭೇಟಿ ನೀಡಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version