ಪೊಲೀಸ್ ಅಧಿಕಾರಿಗಳಂತೆ ನಟಿಸಿ ಮಹಿಳೆಯ ಮಾಂಗಲ್ಯ ಸರ ಕದ್ದ ಕಳ್ಳರು!

shiara police
23/06/2024

ಪೊಲೀಸ್ ಅಧಿಕಾರಿಗಳಂತೆ ನಟಿಸಿ, ವಂಚಕರಿಬ್ಬರು ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಶುಕ್ರವಾರ ನಡೆದಿದೆ.

ಶಿರಾ ತಾಲೂಕಿನ ಕಡವಿಗೆರೆ ಗ್ರಾಮದ ಅಶ್ವತ್ಥಮ್ಮ ಮಾಂಗಲ್ಯ ಸರ ಕಳೆದುಕೊಂಡವರು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾತ್ರೆಗಳನ್ನು ತೆಗೆದುಕೊಂಡು ಸ್ಥಳೀಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗ ಹೋಗುತ್ತಿರುವ ವೇಳೆ ಪೊಲೀಸರು ಎಂದು ಹೇಳಿಕೊಂಡ ಇಬ್ಬರು ಅಪರಿಚಿತರು ಗಮನ ಬೇರೆಡೆಗೆ ಸೆಳೆದು ಅಶ್ವತ್ಥಮ್ಮ ಅವರ ಬಂಗಾರದ ಸರ ತೆಗೆಸಿ, ಪೇಪರ್ ಕವರ್‌ನಲ್ಲಿ ಹಾಕುವಂತೆ ತಿಳಿಸಿದ್ದರು. ಬಳಿಕ ಆ ಕವರನ್ನು ಅಶ್ವಥಮ್ಮ ಅವರ ಬ್ಯಾಗ್‌ ನಲ್ಲಿರಿಸಿದ್ದರು ಎನ್ನಲಾಗಿದೆ.

ಅಲ್ಲಿಂದ ಸ್ವಲ್ಪ ದೂರ ತೆರಳಿದ್ದ ಅಶ್ವತ್ಥಮ್ಮ ಬಳಿಕ ಬ್ಯಾಗ್‌ ನಲ್ಲಿದ್ದ ಪೇಪರ್ ಕವರ್ ತೆಗೆದು ನೋಡಿದಾಗ ಆಘಾತ ಕಾದಿತ್ತು. ಪೇಪರ್ ಕವರ್‌ನಲ್ಲಿ ಚಿನ್ನದ ಮಾಂಗಲ್ಯ ಸರ ಇರಲಿಲ್ಲ. ಇದನ್ನು ಗಮನಿಸಿದ ತಕ್ಷಣವೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಬಂದು ನೋಡಿದಾಗ ವಂಚಕರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಕುರಿತು ಅಶ್ವಥಮ್ಮ ನೀಡಿದ ದೂರಿನ ಮೇರೆಗೆ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version