ಕೆಕೆಆರ್ ಟಿಸಿ ಬಸ್ ಕದ್ದು ಪರಾರಿಯಾದ ಕಳ್ಳರು! - Mahanayaka

ಕೆಕೆಆರ್ ಟಿಸಿ ಬಸ್ ಕದ್ದು ಪರಾರಿಯಾದ ಕಳ್ಳರು!

kkrtc
21/02/2023

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದನ್ನು ಕಳವು ಮಾಡಿರುವ ಘಟನೆ  ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಂಗಳವಾರ ಮುಂಜಾನೆ ಸುಮಾರು 3:30ರ ಸುಮಾರಿಗೆ ಬೀದರ್ ಡಿಪೋಗೆ ಸೇರಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಕೆಎ 38, ಎಫ್ 971 ನ್ನು ಕಳ್ಳರು ಕಳವು ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಚಿಂಚೋಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರು ಬಸ್ ನ್ನು  ತೆಲಂಗಾಣದ ಕಡೆಗೆ ಕೊಂಡೊಯ್ದಿದ್ದಾರೆ ಎಂಬ ಮಾಹಿತಿ ದೊರಕಿದೆ ಎನ್ನಲಾಗಿದೆ.

ಘಟನೆ ಸಂಬಂಧ ತನಿಖೆ ಚುರುಕುಗೊಳಿಸಿರುವ ಪೊಲೀಸರು 2 ತಂಡಗಳನ್ನು ರಚಿಸಿ ಬಸ್ ಹುಡುಕಾಟದಲ್ಲಿ ತೊಡಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ