ಗೋಬಿ ಮಂಚೂರಿ, ಎಗ್ ರೈಸ್ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ! - Mahanayaka

ಗೋಬಿ ಮಂಚೂರಿ, ಎಗ್ ರೈಸ್ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ!

dharawada
22/09/2021

ಧಾರವಾಡ: ತಿಂಡಿಕೊಡಿಸುವ ನೆಪದಲ್ಲಿ ಬಾಲಕಿಯೋರ್ವಳನ್ನು ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಕ್ಕಳ ರಕ್ಷಣಾ ಘಟಕ ನಡೆಸಿರುವ ಕೌನ್ಸೆಲಿಂಗ್ ನ ವೇಳೆ ಬಾಲಕಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ.

ಭಿಕ್ಷೆ ಬೇಡಿ ಬದುಕುತ್ತಿದ್ದ 14 ವರ್ಷ ವಯಸ್ಸಿನ ಬಾಲಕಿಗೆ ಗೋಬಿ ಮಂಚೂರಿ, ಎಗ್ ರೈಸ್ ಕೊಡಿಸುವುದಾಗಿ ಆಮಿಷ ಒಡ್ಡಿ ಆಕೆಯನ್ನು ಕರೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದೆ. ಬಾಲಕಿಯ ಮೇಲೆ ಈ ರೀತಿಯಾಗಿ ಅತ್ಯಾಚಾರ ನಡೆಸಲಾಗುತ್ತಿದೆ ಎನ್ನುವ ದೂರುಗಳು ಬಂದ ಬೆನ್ನಲ್ಲೇ ಅಧಿಕಾರಿಗಳು ಬಾಲಕಿಯನ್ನು ಪತ್ತೆ ಹಚ್ಚಿ ಕೌನ್ಸೆಲಿಂಗ್ ನಡೆಸಿದ್ದಾರೆ. ಈ ವೇಳೆ ಬಾಲಕಿ ಘಟನೆಯನ್ನು ವಿವರಿಸಿದ್ದಾಳೆ ಎಂದು ಹೇಳಲಾಗಿದೆ.

ಕೌನ್ಸೆಲಿಂಗ್​​ ಬಳಿಕ ಬಾಲಕಿ ನೀಡಿದ ಮಾಹಿತಿ ಆಧರಿಸಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕಮಲಾ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಉಪನಗರ ಠಾಣಾ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಈ ನಡುವೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆಯೂ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಭಿಕ್ಷೆ ಬೇಡಿ ಬದುಕುವ ನಿರಾಶ್ರಿತ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸರ್ಕಾರ ಪರ್ಯಾಯವಾದ ವ್ಯವಸ್ಥೆಯನ್ನು ಮಾಡಲೇ ಬೇಕು ಎನ್ನುವ ಒತ್ತಾಯಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

“ನನ್ನ ಪಂಚೆ ಕಳಚ್ಕೊಂಡಿದೆ, ಈಶ್ವರಪ್ಪ…” | ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

ಜಾತಿ ಪೀಡೆಗಳನ್ನು ಮಟ್ಟ ಹಾಕಲು ನಡೆಯಲಿದೆ ಗುಪ್ತ ಸಮೀಕ್ಷೆ: ಅಸ್ಪೃಶ್ಯತೆ ಆಚರಿಸಿದರೆ ಜೈಲೂಟ ಗ್ಯಾರೆಂಟಿ

ತರಗತಿ ಕೋಣೆಯಲ್ಲಿಯೇ ಮಹಿಳೆಯೊಂದಿಗೆ ಅಸಹ್ಯವಾಗಿ ನಡೆದುಕೊಂಡ ಮುಖ್ಯ ಶಿಕ್ಷಕ | ವಿಡಿಯೋ ವೈರಲ್

ಪಾರ್ಟಿ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ!

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?

ಯುವತಿಯೊಂದಿಗಿನ ಫೋಟೋ ಲೀಕ್ ಆಗುವ ಭೀತಿಯಿಂದ ಸ್ವಾಮೀಜಿ ಆತ್ಮಹತ್ಯೆ? | ಡೆತ್ ನೋಟ್ ನಲ್ಲಿ ಏನಿತ್ತು ಗೊತ್ತಾ?

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದ ತಾಯಿ, ಮಗ ದಾರುಣ ಸಾವು

ಇತ್ತೀಚಿನ ಸುದ್ದಿ