ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದ ತೃತೀಯ ಲಿಂಗಿ ಹಿಮಾಂಗಿ ಸಖಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದೇ ಕ್ಷೇತ್ರದಿಂದ ತೃತೀಯ ಲಿಂಗಿ ಹಿಮಾಂಗಿ ಸಖಿ ಅವರು ಕಣಕ್ಕಿಳಿದಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾ ತೃತೀಯ ಲಿಂಗಿ ಹಿಮಾಂಗಿ ಸಖಿ ಅವರಿಗೆ ಟಿಕೆಟ್ ನೀಡಿ ಪ್ರಧಾನಿ ಮೋದಿ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
5 ಭಾಷೆಗಳಲ್ಲಿ ಭಗವತ್ ಕಥಾವನ್ನು ಹೇಳುವ ಹಿಮಾಂಗಿ ಅವರು ಏಪ್ರಿಲ್ 10 ರೊಳಗೆ ವಾರಾಣಸಿಗೆ ಬರಲಿದ್ದಾರೆ. ಅವರೇ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಿಷಿ ಕುಮಾರ್ ತ್ರಿವೇದಿ ಅವರು ನಿನ್ನೆ ಉತ್ತರ ಪ್ರದೇಶದ 20 ಲೋಕಸಭಾ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಇವುಗಳಲ್ಲಿ ಅತ್ಯಂತ ವಿಶೇಷವಾದದ್ದು ಮಹಾಮಂಡಲೇಶ್ವರ ಹಿಮಾಂಗಿ.
ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾದ ನಂತರ ತೃತೀಯ ಲಿಂಗಿಗಳಿಗೆ ಅವರ ಹಕ್ಕು ಮತ್ತು ಗೌರವವನ್ನು ಒದಗಿಸುವ ಕೆಲಸ ಮಾಡುತ್ತೇನೆ ಎನ್ನುತ್ತಾರೆ ಹಿಮಾಂಗಿ ಸಖಿ ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಬೇಟಿ ಬಚಾವೋ-ಬೇಟಿ ಪಢಾವೋ ಘೋಷಣೆ ಚೆನ್ನಾಗಿದೆ, ಆದರೆ ಅವರು ಕಿನ್ನರ್ ಬಚಾವೋ-ಕಿನ್ನರ್ ಪಢಾವೋ ಬಗ್ಗೆ ಎಂದಿಗೂ ಮಾತನಾಡಲಿಲ್ಲ ಎಂದರಲ್ಲದೇ, ತೃತೀಯಲಿಂಗಿಗಳಿಗೂ ಉದ್ಯೋಗ, ಲೋಕಸಭೆ, ವಿಧಾನಸಭೆ, ಶಾಲಾ-ಕಾಲೇಜುಗಳಲ್ಲಿ ಮೀಸಲಾತಿ ಸಿಗಬೇಕು. ಅವರ ಪ್ರತಿನಿಧಿಯೂ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಬೇಕು, ಅವರ ಹಿತಾಸಕ್ತಿಯಲ್ಲಿ ಕೆಲಸ ಮಾಡಬಹುದು ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth