ತಮಿಳುನಾಡಿನಲ್ಲಿ ಭೀಕರ ಅಪಘಾತ: 7 ಮಂದಿ ಸಾವು, 14 ಮಂದಿಗೆ ಗಾಯ - Mahanayaka
10:13 PM Friday 12 - December 2025

ತಮಿಳುನಾಡಿನಲ್ಲಿ ಭೀಕರ ಅಪಘಾತ: 7 ಮಂದಿ ಸಾವು, 14 ಮಂದಿಗೆ ಗಾಯ

24/10/2023

ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ಮುಖಾಮುಖಿ ಡಿಕ್ಕಿ ಹೊಡೆದಿದೆ. ಮೂಲಗಳ ಪ್ರಕಾರ ಬಸ್ ಬೆಂಗಳೂರಿನಿಂದ ತಿರುವಣ್ಣಾಮಲೈಗೆ ತೆರಳುತ್ತಿತ್ತು. ಕರುಮಂಕುಲಂ ಪ್ರದೇಶದಲ್ಲಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡ 14 ಮಂದಿಯನ್ನು ಪೊಲೀಸರು ರಕ್ಷಿಸಿ ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಿರುವಣ್ಣಾಮಲೈ ಜಿಲ್ಲಾ ಪೊಲೀಸರು ಟಾಟಾ ಸುಮೋದಲ್ಲಿ ಬಂದ ಪ್ರಯಾಣಿಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಮೃತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ