ಈ ಬಜೆಟ್ ಬಿಸಿಲು ಕುದುರೆಯಿದ್ದಂತೆ, ಕಣ್ಣಿಗೂ ಕಾಣದು, ಕೈಗೂ ಸಿಗದು: ಡಿ.ಕೆ.ಶಿವಕುಮಾರ್ - Mahanayaka

ಈ ಬಜೆಟ್ ಬಿಸಿಲು ಕುದುರೆಯಿದ್ದಂತೆ, ಕಣ್ಣಿಗೂ ಕಾಣದು, ಕೈಗೂ ಸಿಗದು: ಡಿ.ಕೆ.ಶಿವಕುಮಾರ್

d k shivakumar
17/02/2023

ಬೆಂಗಳೂರು: ಈ ಬಜೆಟ್‌ ಬಿಸಿಲು ಕುದುರೆಯಿದ್ದಂತೆ. ಯಾರ ಕಣ್ಣಿಗೂ ಕಾಣದು, ಕೈಗೂ ಸಿಗದು ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರ್ನಾಟಕ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ವಿಧಾನಸಭೆಯಲ್ಲಿ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯವರ ಡಬಲ್‌ ಇಂಜಿನ್‌ ಕೆಟ್ಟು ನಿಂತು ಹೊಗೆ ಬರುತ್ತಿದೆ. ಬೊಮ್ಮಾಯಿ ಅವರು ತಾವೂ ಒಂದು ಬಜೆಟ್‌ ಮಂಡಿಸಿದ್ದೇವೆ ಎಂದು ಹೇಳಿಕೊಳ್ಳಲು ಇದರ ಪ್ರತಿಯನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ. ಅದನ್ನು ಜಾತ್ರೆಯ ಕನ್ನಡಕ ಹಾಕಿಕೊಂಡು ನೋಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ರಾಮನಗರದಲ್ಲಿ ರಾಮಮಂದಿರ ಕಟ್ಟುವ ಕುರಿತು ಪ್ರತಿಕ್ರಿಯಿಸಿ, ಮೊದಲು ಅವರ ಪಕ್ಷದ ಕಚೇರಿ ಕಟ್ಟಲು ಹೇಳಿ ಎಂದು ತಿರುಗೇಟು ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ