ಇಸ್ರೇಲ್ ಹಮಾಸ್ ಯುದ್ಧದಲ್ಲಿ ನಾಗರಿಕರ ಸಾವು: ಮಾತುಕತೆಗೆ ಕರೆ ನೀಡಿದ ಪ್ರಧಾನಿ ಮೋದಿ - Mahanayaka
2:45 AM Tuesday 27 - February 2024

ಇಸ್ರೇಲ್ ಹಮಾಸ್ ಯುದ್ಧದಲ್ಲಿ ನಾಗರಿಕರ ಸಾವು: ಮಾತುಕತೆಗೆ ಕರೆ ನೀಡಿದ ಪ್ರಧಾನಿ ಮೋದಿ

17/11/2023

ಇಸ್ರೇಲ್-ಹಮಾಸ್ ಯುದ್ಧದಲ್ಲಿ ನಾಗರಿಕರ ಸಾವುಗಳನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಅಲ್ಲದೆ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ ಜಾಗತಿಕ ದಕ್ಷಿಣದಲ್ಲಿ ಏಕತೆ ಮತ್ತು ಸಹಕಾರದ ತುರ್ತು ಅಗತ್ಯವನ್ನು ಅವರು ಬಯಸಿದ್ದಾರೆ.

2 ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿ ಸೇರಿದಂತೆ ಹಿಂಸಾಚಾರ ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವನ್ನು ಒತ್ತಿ ಹೇಳಿದರು. ಸಂಘರ್ಷ ಪರಿಹಾರದ ಮೂಲಾಧಾರಗಳಾಗಿ ಸಂಯಮ ಮತ್ತು ಮಾತುಕತೆಗೆ ಆದ್ಯತೆ ನೀಡುವ ಮಹತ್ವವನ್ನು ಪ್ರಧಾನಿ ಒತ್ತಿ ಹೇಳಿದರು.

ಪಶ್ಚಿಮ ಏಷ್ಯಾ ಪ್ರದೇಶದ ಘಟನೆಗಳಿಂದ ಹೊಸ ಸವಾಲುಗಳು ಹೊರಹೊಮ್ಮುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಅಕ್ಟೋಬರ್ 7 ರಂದು ಇಸ್ರೇಲ್ ನಲ್ಲಿ ನಡೆದ ದಾಳಿಯನ್ನು ಭಾರತ ಖಂಡಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದರು. “ನಾವು ಸಂಯಮದಿಂದ ವರ್ತಿಸಿದ್ದೇವೆ. ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದ್ದೇವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವುಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದಿದ್ದಾರೆ.

ಇತ್ತೀಚಿನ ಸುದ್ದಿ