ಆರ್ ಎಸ್ ಎಸ್ ನ್ನು ಒಪ್ಪಿಕೊಳ್ಳುವವರು ದೇಶ ವಿರೋಧಿಗಳು: ಸಚಿವ ತಂಗಡಗಿ

shivaraj tangadagi
19/10/2025

ಕೊಪ್ಪಳ: ಯಾರೂ ಆರ್ ಎಸ್ ಎಸ್ ಒಪ್ಪಿಕೊಳ್ಳುತ್ತಾರೆ ಅವರು ದೇಶ ವಿರೋಧಿಗಳು . ಆರ್ ಎಸ್ ಎಸ್ ದೇಶಭಕ್ತಿ ಸಂಘಟನೆ ಅಂತಾ ಯಾವ ಮೂಲದಿಂದ ಒಪ್ಕೋತಿರಿ. ಇವರು ಗಾಂಧಿ, ಬಸವಣ್ಣ, ಬುದ್ದ ಯಾರನ್ನೂ ಒಪ್ಪಲ್ಲ. ಬಸವಣ್ಣರನ್ನ ಎಲ್ಲರೂ ಒಪ್ಕೋತಾರೆ. ಆದ್ರೆ ಆರ್ ಎಸ್ ಎಸ್ ನವರು ಒಪ್ಪಲ್ಲ ಎಂದು ಸಚಿವ ತಂಗಡಗಿ (Shivaraj Tangadagi) ಹೇಳಿಕೆ ನೀಡಿದ್ದಾರೆ.

ಕೊಪ್ಪಳದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅವರು(RSS) ಅಂಬೇಡ್ಕರ್ ಅವರನ್ನು ಒಪ್ಪಲ್ಲ, ರಾಷ್ಟ್ರ ದ್ವಜ ಒಪ್ಪಲ್ಲ, ರಾಷ್ಟ್ರಗೀತೆ ಒಪ್ಪಲ್ಲ. ಮೋದಿ, ಅಶೋಕ, ಯತ್ನಾಳ ಎಲ್ಲರೂ ಆರ್ ಎಸ್ ಎಸ್ ಅಂತಾರೆ‌. ಯಾವ ಮೂಲೆಯಿಂದ ನಾವು ರಾಷ್ಟ್ರಭಕ್ತ ಸಂಘಟನೆ ಎಂದು ಹೇಳುತ್ತೀರಿ. ಬೇರೆ ಯಾರಾದರೂ ಆಯುಧ ಹಿಡಿದುಕೊಂಡು ಓಡಾಡಿದ್ರೆ ಎಫ್ ಐ ಆರ್ ಮಾಡುತ್ತೀರಿ. ಇವರು ಬಡಿಗೆ ದೊಣ್ಣೆ ಹಿಡಿದು ಕೊಂಡು ಓಡಾಡಿದ್ರೆ ಯಾಕೆ ಎಫ್ ಐ ಆರ್ ಮಾಡಬಾರದು ಅವರು ಪ್ರಶ್ನಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಇವರು ಭಾಗಿಯಾಗಿದ್ದಾರಾ? RSS ಎನ್ನುವುದು ರಿಜಿಸ್ಟರ್ ಆಗಿಲ್ಲ. RSS ಅನ್ನೋದು ಕೋಮುವಾದ ಸಂಸ್ಥೆ. ಇದು ದೇಶಭಕ್ತಿ ಸಂಸ್ಥೆ ಅಲ್ಲ . ನಾನು ಇದನ್ನು ಬಹಳ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಇದರಲ್ಲಿ ಎರಡು ಮಾತೇ ಇಲ್ಲ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version