ಸಂಸ್ಕೃತ ಭಾಷೆ ಗೊತ್ತಿಲ್ಲದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ - Mahanayaka
12:52 PM Wednesday 17 - September 2025

ಸಂಸ್ಕೃತ ಭಾಷೆ ಗೊತ್ತಿಲ್ಲದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

sri sugunendra theertha swamiji
02/09/2024

ಉಡುಪಿ:  ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ ಅಂತ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.


Provided by

ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,  ಸ್ವರ್ಗಕ್ಕೆ ಹೋಗಲು ಬಯಸುವವರು ಸಂಸ್ಕೃತ ಕಲಿಯಬೇಕು ಎಂದು ಸ್ವಾಮೀಜಿ ಹೇಳಿದ್ದು, ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗಳಿಗೆ ಕಾರಣವಾಗಿದೆ.

ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ. ಸಂಸ್ಕೃತ ಸರಳ, ಸುಂದರ ಮತ್ತು ಸುಲಭವಾದ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ. ಎಲ್ಲಾ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತವಾಗಿದೆ. ಇದು ಕೇವಲ ಭಾರತೀಯ ಭಾಷೆಗಳ ಮೂಲವಲ್ಲದೇ ಆಂಗ್ಲಭಾಷೆಯ ಮೂಲವೂ ಆಗಿದೆ ಎಂದು ಅವರು ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೇರಳ ರಾಜ್ಯಪಾಲ ಆರಿಫ್ ಖಾನ್, ದೇವರಿಗೆ ಯಾವ ಭಾಷೆಯಲ್ಲಿ ಪ್ರಾರ್ಥಿಸುತ್ತೇವೆ ಎನ್ನುವುದಕ್ಕಿಂತ ಯಾವ ಭಾವದಲ್ಲಿ ಪ್ರಾರ್ಥಿಸುತ್ತೇವೆ ಎನ್ನುವದು ಮುಖ್ಯ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ