ಚಾಮರಾಜನಗರದಲ್ಲಿ ಸಂವಿಧಾನ ಪೀಠಿಕೆ ಓದಿದ  ಸಹಸ್ರಾರು ಮಂದಿ!!

constitution
15/09/2023

ಚಾಮರಾಜನಗರ: ಸಂವಿಧಾನ ಪೀಠಿಕೆಯನ್ನು ವಿಶ್ವಾದ್ಯಂತ ಏಕಕಾಲದಲ್ಲಿ ಓದುವ ಕಾರ್ಯಕ್ರಮಕ್ಕೆ ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಚಾಮರಾಜನಗರ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಏಕಕಾಲದಲ್ಲಿ ದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು ಭಾಗಿಯಾಗಿ ಏಕಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ಡಿಸಿ ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಬಿಆರ್ ಟಿ ಡಿಸಿಎಫ್ ದೀಪ್ ಜೆ.ಕಂಟ್ರಾಕ್ಟರ್ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

Exit mobile version